Advertisement

ಕಾನನಕಟ್ಟೆ ಗ್ರಾಮದ 100ಕ್ಕೂ ಹೆಚ್ಚು ಜನರಿಗೆ ನಿಗೂಢ ಜ್ವರ

11:44 PM Jun 21, 2022 | Team Udayavani |

ಜಗಳೂರು: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ಕಳೆದ 20 ದಿನಗಳಿಂದ ನಿಗೂಢ ಜ್ವರದಿಂದ 100ಕ್ಕೂ ಹೆಚ್ಚು ಮಂದಿ ಬಳಲುತ್ತಿರುವುದು ಬೆಳಕಿಗೆ ಬಂದಿದೆ.

Advertisement

ಅಣಬೂರು ಗ್ರಾ.ಪಂ. ವ್ಯಾಪ್ತಿಯ ಕಾನನಕಟ್ಟೆ ಗ್ರಾಮದಲ್ಲಿ ಒಂದು ಸಾವಿರಕ್ಕೂ ಅ ಧಿಕ ಜನಸಂಖ್ಯೆ ಇದೆ. ಗ್ರಾಮದ ಪ್ರತಿಯೊಂದು ಮನೆಯಲ್ಲೂ ಜನ ನಿಗೂಢ ಜ್ವರದಿಂದ ಬಳಲುತ್ತಿದ್ದಾರೆ.

ಜ್ವರ, ಕಾಲುನೋವು, ಮೂಗಿನ ಹತ್ತಿರ ಕಪ್ಪು ಕಲೆ, ಕೈಕಾಲು ಬಾವು ಬರುವುದು, ಚರ್ಮದ ಪೊರೆ ಸುಲಿಯುವುದು, ಗುಳ್ಳೆಗಳು, ಸುಸ್ತು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ.

ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿಲ್ಲ. ಸೊಳ್ಳೆ ಕಾಟ ಹಾಗೂ ಗ್ರಾಮಕ್ಕೆ ಸರಬರಾಜಾಗುತ್ತಿರುವ ನೀರು ಸೇವನೆಯಿಂದ ಈ ರೀತಿ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next