Advertisement

Vitla ಜ್ವರ ಉಲ್ಬಣ: ಯುವಕ ಸಾವು

11:07 PM Jul 25, 2024 | Team Udayavani |

ವಿಟ್ಲ: ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ.

Advertisement

ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ, ಆಟೋ ರಿಕ್ಷಾ ಮೆಕ್ಯಾನಿಕ್‌ ಸಿ.ಎಚ್‌. ಹನೀಫ್‌ ಅವರ ಪುತ್ರ ಬಾತಿಷಾ (22) ಮೃತಪಟ್ಟವರು.

ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮನ್‌ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಗುರುವಾರ ಬೆಳಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next