Advertisement

ಡೆಲ್ಟಾ ಹಿನ್ನೆಲೆ : ಗೋವಾದಲ್ಲಿ ಕೆಲ ದಿನಗಳ ಕಾಲ ಕರ್ಫ್ಯೂ ಸಾಧ್ಯತೆ : ಪ್ರಮೋದ ಸಾವಂತ್

04:49 PM Jun 25, 2021 | Team Udayavani |

ಪಣಜಿ: ರಾಜ್ಯದಲ್ಲಿ ಜೂನ್ 28 ರವರೆಗೆ ಕರ್ಫ್ಯೂ ಜಾರಿಯಲ್ಲಿದ್ದು ಸದ್ಯ ಡೆಲ್ಟಾ ಪ್ಲಸ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಕೆಲ ದಿನಗಳ ಕಾಲ ಕರ್ಫ್ಯೂ ಮುಂದುವರೆಸುವ ಸಾಧ್ಯತೆಯನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಹಿಂದಿನಂತೆಯೇ ಒಪಿಡಿ ಸೇವೆ ಪುನರಾರಂಭಗೊಳ್ಳಲಿದೆ ಎಂದು ಸಿಎಂ ಸಾವಂತ್ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

Advertisement

ಪಣಜಿಯಲ್ಲಿ ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು- ಗೋವಾ ಸರ್ಕಾರವು ಜೂನ್ 28 ರ ಬೆಳಿಗ್ಗೆ 7 ಗಂಟೆಯವರೆಗೆ ರಾಜ್ಯದಲ್ಲಿ ಸದ್ಯ ಕರ್ಫ್ಯೂ ಜಾರಿಯಲ್ಲಿದೆ. ಇದು ಮೂರನೇಯ ಬಾರಿ ಕರ್ಫ್ಯೂ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ರಾಜ್ಯದಲ್ಲಿ ಮೀನು ಮಾರುಕಟ್ಟೆಗಳನ್ನು ತೆರೆಯಲು ಅವಕಾಶ ನೀಡಿದೆ. ಇಷ್ಟೇ ಅಲ್ಲದೆಯೇ ಮಾಲ್‍ಗಳಲ್ಲಿಯ ಅಂಗಡಿಗಳನ್ನು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.

ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಡೆಲ್ಟಾಪ್ಲಸ್ ಕೋವಿಡ್ ರೂಪಾಂತರಿ ಪತ್ತೆಯಾದ ಹಿನ್ನೆಲೆಯಲ್ಲಿ ಗೋವಾ ಮಹಾರಾಷ್ಟ್ರ ಗಡಿಯಲ್ಲಿ ಸ್ಕ್ರೀನಿಂಗ್ ತಪಾಸಣೆ ನಡೆಸಲಾಗುತ್ತಿದೆ. ಅಲ್ಲಿ ಖಾಸಗಿ ಪ್ರಯೋಗಾಲಯ ಸ್ಥಾಪಿಸಲು ಅನುಮತಿ ನೀಡಿದ್ದೇವೆ. ಗೋವಾದಲ್ಲಿ ಇದುವರೆಗೂ ಡೆಲ್ಟಾಪ್ಲಸ್ ರೂಪಾಂತರಿಯ ಯಾವುದೇ ಪ್ರಕರಣ ದೃಢಪಟ್ಟಿಲ್ಲ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next