ಹೊಸದಿಲ್ಲಿ: ಸೋಮವಾರ ದಿಂದ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ 18 ವಯೋಮಿತಿ ಏಷ್ಯಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್ ಆರಂಭವಾಗಲಿದೆ.
ಭಾರತ, ಜಪಾನ್, ಚೀನ, ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಒಟ್ಟು 16 ತಂಡ ಗಳು ಭಾಗವಹಿಸಲಿವೆ. ಈ ಕೂಟವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಡಾ| ಕೆ.ಸಿ. ನಾರಾಯಣ ಗೌಡ ಹೇಳಿದ್ದಾರೆ.
ಬೆಂಗಳೂರಿನ ಕಂಠೀರವ ಮತ್ತು ಕೋರಮಂಗಲದ ಒಳ ಕ್ರೀಡಾಂಗಣ ಗಳಲ್ಲಿ ಈ ಪಂದ್ಯಗಳು ನಡೆಯಲಿವೆ. ಇಲ್ಲಿ ಅಗ್ರ ನಾಲ್ಕು ಸ್ಥಾನ ಪಡೆದ ತಂಡಗಳು, 2023ರ ಜುಲೈನಲ್ಲಿ ಸ್ಪೇನ್‌ನಲ್ಲಿ ನಡೆಯಲಿರುವ 19 ವಯೋಮಿತಿ ಫಿಬಾ ಮಹಿಳಾ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿವೆ ಎಂದು ಸಚಿವರು ಹೇಳಿದ್ದಾರೆ.
ಈ ಕ್ರೀಡಾಕೂಟಕ್ಕೆ ಕ್ರೀಡಾ ಇಲಾಖೆಯಿಂದ 1.60 ಕೋಟಿ ರೂ. ನೀಡಲಾಗಿದೆ. ಕಂಠೀರವ ಒಳಾಂಗಣವನ್ನು ಸಿದ್ಧ ಮಾಡಲು 77 ಲಕ್ಷ ರೂ. ವ್ಯಯಿಸಲಾಗಿದೆ. ಇನ್ನು ಕೋರಮಂಗಲ ಒಳಾಂಗಣವನ್ನು ಸಿದ್ಧ ಮಾಡಲು 8.96 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಭಾರತ ತಂಡದ ಆಟಗಾರ್ತಿಯರಿಗೆ ಕಿಟ್‌ಗಳನ್ನು ವಿತರಿಸಲಾಯಿತು.