Advertisement
ಈ ಕುರಿತು ರಾಜ್ಯಸರ್ಕಾರಕ್ಕೆ ಆದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಈ ಸೂಚನೆ ನೀಡಿದೆ.
Related Articles
ಪುರಸಭೆಗಳು, 28 ಪಟ್ಟಣ ಪಂಚಾಯಿತಿಗಳ ಅವಧಿ ಇದೇ ವರ್ಷ ಮೇ ತಿಂಗಳಿನಿಂದ ಹಂತ-ಹಂತವಾಗಿ ಪೂರ್ಣಗೊಳ್ಳಲಿದೆ. ಹೀಗಾಗಿ ಒಟ್ಟು 116 ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದ್ದು, ಆಗಸ್ಟ್ 15ರಲ್ಲಿ ಚುನಾವಣಾ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿದೆ. ಆದರೆ, ರಾಜ್ಯ ಸರ್ಕಾರ 218 ಸ್ಥಳೀಯ ಸಂಸ್ಥೆಗಳ ಪೈಕಿ 18 ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ ಹಾಗೂ ಮೀಸಲು ಕ್ಷೇತ್ರ ಪಟ್ಟಿಯನ್ನು ನೀಡಿಲ್ಲ.
Advertisement
ಹೀಗಾಗಿ, ನೂರಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪಟ್ಟಿ ನೀಡದಿದ್ದರೆ ಅವಧಿ ಪೂರ್ಣಗೊಂಡ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕಾಗಿದ್ದು, ಪುನ: ಚುನಾವಣಾ ಪ್ರಕ್ರಿಯೆ ವಿಳಂಬವಾಗಲಿದೆ. ಅಲ್ಲದೆ, 2019ರಲ್ಲಿ ನಡೆಯಬೇಕಾದ 102 ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಗಳ ಮೇಲೆಯೂ ಪರಿಣಾಮಬೀರಲಿದೆ ಎಂದು ಆಯೋಗ ಅರ್ಜಿಯಲ್ಲಿ ವಿವರಿಸಿದೆ.