Advertisement
ಜಿಲ್ಲಾಡಳಿತದ ಈ ಕ್ರಮದಿಂದ ಪ್ರವಾಸಿಗರನ್ನೇ ನಂಬಿ ಜೀವನ ಸಾಗಿ ಸುತ್ತಿರುವ ಜೀಪು ಚಾಲಕರಿಗೆ ಹಾಗೂ ಗ್ರಾಮಸ್ಥರಿಗೆ ಕಷ್ಟ, ನಷ್ಟ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Related Articles
Advertisement
ಜಿಲ್ಲಾಧಿಕಾರಿಗಳು ಪ್ರವೇಶ ನಿಷೇಧಿ ಸಿರುವ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಅವರು ಮಾಂದಲಪಟ್ಟಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸ್ಥಳೀಯ ಗ್ರಾಮಸ್ಥರು ಹಾಗೂ ಜೀಪು ಚಾಲಕರು ಎಸ್‌ಪಿ ಅವರ ಬಳಿ ತಮ್ಮ ಅಳಲನ್ನು ತೋಡಿಕೊಂಡರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ ಸುಮನ್ ಪನ್ನೇಕರ್ ಜಿಲ್ಲಾಧಿಕಾರಿಗಳ ಕ್ರಮವನ್ನು ಸಮರ್ಥಿಸಿಕೊಂಡರು.
ಎಸ್‌ಪಿ ಸ್ಪಷ್ಟನೆಮಾಂದಲಪಟ್ಟಿಗೆ ತೆರಳುವ ರಸ್ತೆಯ ಬದಿಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿಯುತ್ತಿದೆ. ಈ ಪ್ರಮಾಣ ಹೆಚ್ಚಾಗಿ ಪ್ರವಾಸಿಗರು ಅಪಾಯಕ್ಕೆ ಸಿಲುಕಬಹುದೆನ್ನುವ ಕಾರಣಕ್ಕಾಗಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸ್ಥಳೀಯರಾದರೆ ಅಪಾಯದಿಂದ ಪಾರಾಗಬಹುದು, ಆದರೆ ಹೊರಗಿನಿಂದ ಆಗಮಿಸುವ ಪ್ರವಾಸಿಗರು ಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿದೆೆ ಎಂದು ಎಸ್‌ಪಿ ಸುಮನ್ ಪನ್ನೇಕರ್ ಅವರು ಹೇಳಿದರು.
ಮಳೆ ಕಡಿಮೆ ಇರುವುದರಿಂದ ಆದೇಶವನ್ನು ಪುನರ್ ಪರಿಶೀಲಿಸಲು ಅವಕಾಶವಿದ್ದು, ಜಿಲ್ಲಾಧಿಕಾರಿಗಳ ನಿರ್ಧಾರವೇ ಅಂತಿಮವೆಂದು ಎಸ್‌ಪಿ ಸ್ಪಷ್ಟಪಡಿಸಿದರು.