Advertisement
ಭಾನುವಾರ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಆಯೋ ಜಿಸಿದ್ದ ಇಂದಿರಾಗಾಂಧಿ ಯವರ ಜನ್ಮ ಶತಮಾನೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇಂದಿರಾ ಗಾಂಧಿಯವರು ದೇಶದಲ್ಲಿ ಬ್ಯಾಂಕ್‌ಗಳ ರಾಷ್ಟ್ರೀ ಕರಣ ಮಾಡಿ ಬಡವರಿಗೆ ಬ್ಯಾಂಕ್ ಬಾಗಿಲು ತೆರೆದರೆ ಪ್ರಧಾನಿ ಮೋದಿಯವರು ನೋಟ್‌ಬ್ಯಾನ್ ಮಾಡಿ ಬಡವರಿಗೆ ಬ್ಯಾಂಕ್ ಬಾಗಿಲು ಮುಚ್ಚಿದರು’ ಎಂದು ಹೇಳಿದರು.
ಕೋಮುಗಲಭೆ ಸೃಷ್ಟಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿ¨ªಾರೆ. ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು. ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿ, ರಾಜೀವ್‌ಗಾಂಧಿ ದೇಶಕ್ಕಾಗಿ ತ್ಯಾಗ ಮಾಡಿ¨ªಾರೆ. ತ್ಯಾಗ, ಬಲಿದಾನದ ಶ್ರೇಷ್ಠತೆ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ವಿವರಿಸಿದರು. ಸಂಸದ ಡಾ.ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಮೊದ ಲಾ ದವರು ಉಪಸ್ಥಿತರಿದ್ದರು. ಸಿಎಂ ಗುಣಗಾನ ಮಾಡಿದ ಪರಂ, ಜಾಫರ್ ಶರೀಫ್
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಪರ್ ಶರೀಫ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುಣಗಾನ ಮಾಡಿದರು. “ಇಂದಿರಾ ಗಾಂಧಿಯವರ ರೋಟಿ, ಕಪಡಾ ಔರ್ ಮಕಾನ್ ಆಲೋಚನೆಯಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನಡೆಯುತ್ತಿದೆ. ಇಂದಿರಾ ಗಾಂಧಿಯವರ ಹಸಿವು ಮುಕ್ತ ಭಾರತದ ಕನಸನ್ನು ಮುಖ್ಯಮಂತ್ರಿ ನನಸು ಮಾಡುತ್ತಿದ್ದಾರೆ. ಸದನದಲ್ಲಿ ವಿಪಕ್ಷಗಳಿಗೆ ಉತ್ತರಸುತ್ತಾ, ಸದನ ಹೊರಗೆ ಪಕ್ಷದ ಕಾರ್ಯಗಳನ್ನು ನಡೆಸುವಲ್ಲಿ ಸಿಎಂ ಬಿಜಿಯಾಗಿದ್ದಾರೆ. ಚುನಾವಣೆ ಹತ್ತಿರ ಬಂದಂತೆ ಇನ್ನಷ್ಟು ಚುರುಕಾಗಿ¨ªಾರೆ’ ಎಂದು ಸಿದ್ದರಾಮಯ್ಯ ಅವರನ್ನು ಪರಮೇಶ್ವರ್ ಬಣ್ಣಿಸಿದರು.ಮಾಜಿ ಕೇಂದ್ರ ಸಚಿವ ಸಿ.ಕೆ.ಜಾಫರ್ ಶರೀಫ್ ಮಾತನಾಡಿ, ಸೇಡಿನ ರಾಜಕಾರಣ ಮಾಡುವುದನ್ನು ಬಿಡಬೇಕು.ಅನಗತ್ಯವಾಗಿ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ತಿಳಿಸಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು. ತಮ್ಮ ಭಾಷಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಹಾಡಿ ಹೊಗಳಿದ ಜಾಫರ್, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಎಲ್ಲರೂ ಒಟ್ಟಿಗೆ ಕೆಲಸ ಮಾಡಿದರೆ ಯಾವುದೂ ಕಷ್ಟವಲ್ಲವೆಂದು ತಿಳಿಸಿದರು.