ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ.
ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29 ವ) ಕೊಲೆಯಾದ ಯುವಕ. ಅತನ ಸ್ನೇಹಿತರಾದ ನೌಫಾಲ್ ಮತ್ತು ಇನ್ನೋರ್ವ ಈ ಕೃತ್ಯ ನಡೆಸಿದ್ದಾರೆ.
ಇವರು ಗಾಂಜ ಗಿರಾಕಿಗಳಾಗಿದ್ದು, ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು ಗಂಟೆಯ ವೇಳೆ ಮಾತಿಗೆ ಮಾತು ಬೆಳೆದು ಗಾಂಜ ವಿಚಾರದಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮೂವರು ಗಾಂಜ ಸೇವಕರು ಮತ್ತು ಮಾರಾಟಗಾರರು ಎಂಬ ಮಾತುಗಳು ಸ್ಥಳೀಯರಿಂದ ಹೇಳಲಾಗುತ್ತಿದ್ದು, ಇತ್ತೀಚಿಗೆ ಗಾಂಜಾ ವಿಚಾರದಲ್ಲಿ ಗಲಾಟೆಗಳು ನಡೆಯುವುದು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
Related Articles
ಇದನ್ನೂ ಓದಿ:ಇಡಿ ಬಳಿಕ ಎಸಿಬಿ ಶಾಕ್: ಜಮೀರ್ ಅಹಮದ್ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
ಪೊಲೀಸರು ಗಾಂಜಾ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸಿ ಬಂಟ್ವಾಳದಲ್ಲಿ ಶಾಂತಿ ನೆಲೆಸಲು ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.