Advertisement
ರಾಜ್ಯದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಹಾಗೂ ಆಡಳಿತ ಕುಲಸಚಿವರ ಪ್ರೊ.ಪಾಟೀಲ್ ನಡುವೆ ಶೀತಲ ಸಮರ ಆರಂಭವಾಗಿದ್ದು. ಇದರ ಪರಿಣಾಮ ಇಬ್ಬರೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ನೀಡಿದ್ದಾರೆ.
Related Articles
Advertisement
ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿದ್ದ ಪ್ರೊ.ಪಾಟೀಲ್ ಅವರ ಜಾಗಕ್ಕೆ ಕೆಎಎಸ್ ಅಧಿಕಾರಿ ಶ್ರೀಧರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಮೇ 10 ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಶ್ರೀಧರ್ ಅವರು ಮೇ 11ರಂದು ಅಧಿಕಾರಿ ಸ್ವೀಕರಿಸಿದ್ದಾರೆ. ಆದರೆ ಅವರ ನೇಮಕವನ್ನು ಸರಕಾರ ರದ್ದು ಮಾಡಿ ಅವರನ್ನು ಕೌಶಾಲ್ಯಾಭಿವೃದ್ಧಿ ನಿಗಮದ ಶಿವಮೊಗ್ಗ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ನೀಡಿದೆ. ಈ ನಡುವೆ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅವರು ಪ್ರೊ.ಪಾಟೀಲ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಅವರನ್ನು ಮಾತೃ ಇಲಾಖೆಗೆ ಮರಳಿಸಿದೆ. ಅಲ್ಲದೇ ಕಚೇರಿಗೆ ಬೀಗ ಕೂಡ ಹಾಕಿಸಿದ್ದರು. ಬುಧವಾರ ವಿವಿಗೆ ಆಗಮಿಸಿದ ಪ್ರೊ.ಪಾಟೀಲ್ ಬೀಗ ಒಡೆದು ಒಳಪ್ರವೇಶಿಸಿದ್ದಾರೆ. ಇದನ್ನು ಪ್ರಶ್ನಿಸಿ ಕುಲಸಚಿವ ಬಿ.ಪಿ.ವೀರಭದ್ರಪ್ಪ ಬುಧವಾರ ಪಾಟೀಲ್ ವಿರುದ್ಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ನಿಮ್ಮ ಈ ವ್ಯವಸ್ಥೆ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಕೇಂದ್ರದ ವಿರುದ್ಧ ಕುಮಾರಸ್ವಾಮಿ ಕಿಡಿ