Advertisement

ಗುಂಪುಗಳ ನಡುವೆ ಗಲಭೆಯಲ್ಲಿ ಆರ್ ಎಸ್ಎಸ್ ಕಾರ್ಯಕರ್ತನ ಕೊಲೆ: 6 ಎಸ್ ಡಿಪಿಐ ಕಾರ್ಯಕರ್ತರ ಬಂಧನ

10:07 AM Feb 25, 2021 | Team Udayavani |

ಕೊಚ್ಚಿನ್: ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಆರ್ ಎಸ್ಎಸ್ ಕಾರ್ಯಕರ್ತನೋರ್ವ ಕೊಲೆಯಾದ ಘಟನೆ ಕೇರಳದ ಅಲಪ್ಪು ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಎಸ್ ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಅಲಪ್ಪು ವಿನ ವಲಯಾರ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ನಂದು ಎಂದು ಗುರುತಿಸಲಾಗಿದೆ. ಈತನಿಗೆ ಹರಿತವಾದ ಆಯುಧದಿಂದ ಚುಚ್ಚಲಾಗಿದೆ. ಕೂಡಲೇ ಈತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ, ದಾರಿ ಮಧ್ಯೆ ಅಸುನೀಗಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಕೊಲೆ, ದರೋಡೆಗೆ ಜೈಲಲ್ಲೇ ಪ್ಲಾನ್‌: ಮಂಗಳೂರಿನ ರೌಡಿ ಶೀಟರ್‌ಗಳ ಕರೆಸಿ ಕೊಲೆಗೆ ಸಂಚು!

ವಲಯಾರ್ ನಲ್ಲಿ ಆರ್ ಎಸ್ ಎಸ್ ಮತ್ತು ಎಸ್ ಡಿಪಿಐ ಸಂಘಟನೆಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಇದು ಆರ್ ಎಸ್ ಎಸ್ ಕಾರ್ಯಕರ್ತನ ಕೊಲೆಯಲ್ಲಿ ಅಂತ್ಯವಾಗಿದೆ.

ಗಲಾಟೆಯ ಪರಿಣಾಮ ಆರ್ ಎಸ್ಎಸ್ ಮತ್ತು ಎಸ್ ಡಿಪಿಐ ನ ಕೆಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ.

Advertisement

ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿಯಿದ್ದು, ಘಟನೆಯನ್ನು ಖಂಡಿಸಿ ಇಂದು ಅಲಪ್ಪು ಬಂದ್ ಗೆ ಬಿಜೆಪಿ ಕರೆ ನೀಡಿದೆ.

ಇದನ್ನೂ ಓದಿ: ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next