Advertisement

ಶಾಶ್ವತ ನೀರಾವರಿಗಾಗಿ ಹೋರಾಟ

04:16 PM Dec 02, 2019 | Suhan S |

ಬೇಲೂರು: ಬೇಲೂರು ವಿಧಾನಸಭಾ ಕ್ಷೇತ್ರದ ಬಯಲು ಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ನಾವು ನೀರಿಗಾಗಿ ಜೈಲಿಗೂ ಹೋಗಲು ಸಿದ್ಧರಿದ್ದೇವೆ ಎಂದು ಅರಸೀಕೆರೆ ತಾಲೂಕು ಕೊಳಗುಂದ ಕೇದಿಗೆ ಮಠದ ಶ್ರೀಜಯಚಂದ್ರ ಶೇಖರ ಸ್ವಾಮೀಜಿ ಹೇಳಿದರು.

Advertisement

ತಾಲೂಕಿನ ಹೆಬ್ಟಾಳು ಗ್ರಾಮದಲ್ಲಿನ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ತಾಲೂಕಿನ ಬರಗಾಲ ಪೀಡಿತ ಪ್ರದೇಶಗಳಿಗೆ ಶಾಶ್ವತ ನೀರಾವರಿ ಕಲ್ಪಿಸಬೇಕೆಂದು ಹತ್ತಾರು ಹೋರಾಟಗಳನ್ನು ಮಾಡಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಬೇಸರದ ಸಂಗತಿಯಾಗಿದೆ ಎಂದರು.

ಬೇಲೂರು ಕ್ಷೇತ್ರದ ಹಳೇಬೀಡುಮಾದೀಹಳ್ಳಿ ಮತ್ತು ಜಾವಗಲ್‌ಹೋಬಳಿ ವ್ಯಾಪ್ತಿಯಲ್ಲಿ ದಿನನಿತ್ಯ ಕುಡಿಯುವ ನೀರಿನ ಬವಣೆ ಹೇಳತೀರದಾಗಿದೆ. ವಿಶೇಷವಾಗಿ ಜಾವಗಲ್‌ಹೋಬಳಿ ತೀವ್ರ ಬರಗಾಲದಿಂದ ತತ್ತರಿಸಿಸುತ್ತಿದ್ದು, ಅಲ್ಲಿನ ಜನರು ಪಟ್ಟಣಗಳ ಕಡೆಗೆ ವಲಸೆ ಹೋಗುವಸ್ಥಿತಿ ನಿರ್ಮಾಣವಾಗಿದೆ ಈ ಹಿನ್ನೆಲೆಯಲ್ಲಿ ಬಯಲು ಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸಬೇಕೆಂದು ಐದಾರು ವರ್ಷಗಳಿಂದ ಹೋರಾಟದ ಸಂದರ್ಭ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ಗಳು ತೇಪೆ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜನಪ್ರತಿನಿಧಿಗಳು ನೀರಾವರಿಗಾಗಿ ತಮ್ಮ ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ ಎಂದ ಅವರು, ಬೇಲೂರಿನಲ್ಲಿ ಕಳೆದ ಎರಡು ವರ್ಷದ ಹಿಂದೆ ನಡೆದ ನೀರಾವರಿ ಹೋರಾಟದಲ್ಲಿ ಪುಷ್ಪಗಿರಿ ಶ್ರೀಗಳು ಸೇರಿದಂತೆ 83 ಜನರ ಮೇಲೆ ಕೇಸು ದಾಖಲಿಸಲಾಗಿದೆ. ಈ ಭಾಗಕ್ಕೆ ಶಾಶ್ವತ ವಾಗಿ ನೀರಾವರಿಯನ್ನು ಕಲ್ಪಿಸುವವರೆಗೂ ನಿರಂತರ ಹೋರಾಟ ನಡೆಯುತ್ತದೆ. ರಾಜೀ ಸಂಧಾನ ಸಾಧ್ಯವಿಲ್ಲ ಎಂದರು.

ಈ ಸಂದರ್ಭ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವಕುಮಾರ್‌, ತಾಪಂ ಮಾಜಿ ಅಧ್ಯಕ್ಷೆ ನಳಿನಾ, ಗ್ರಾಪಂ ಸದಸ್ಯೆ ಹೇಮಾ ಇನ್ನಿತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next