Advertisement

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ

03:10 PM May 22, 2022 | Team Udayavani |

ಗೌರಿಬಿದನೂರು: ರಾಜ್ಯ ಸರ್ಕಾರ ಪ.ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯ ಗಳನ್ನು ನಿರ್ಲಕ್ಷಿಸುತ್ತಿದೆ ಮೀಸಲಾತಿ ಬಗ್ಗೆ ಸಭೆ ಸಮಾರಂಭಗಳಲ್ಲಿ ಬರೀ ಭಾಷಣಕ್ಕೆ ಮಾತ್ರ ಸೀಮಿತವಾಗಿದೆ ಎಂದು ವಾಲ್ಮೀಕಿ ಸಮುದಾಯದ ಮುಖಂಡ ಆರ್‌.ಅಶೋಕ್‌ ಕುಮಾರ್‌ ವಿಷಾದ ವ್ಯಕ್ತಪಡಿಸಿದರು.

Advertisement

ನಗರದ ಅಂಬೇಡ್ಕರ್‌ ವೃತ್ತದಲ್ಲಿ ಅಂಬೇಡ್ಕರ್‌ ಪುತ್ಥಳಿಗೆ ಹಾಗೂ ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಪುತ್ಥಳಿಗೆ ಮಾಲಾ ರ್ಪಣೆ ಮಾಡಿ ಪ್ರತಿಭಟನೆಗೆ ಚಾಲನೆ ನೀಡಿ ಮಾನವ ಸರಪಳಿ ನಿರ್ಮಿಸಿ ಮಾತ ನಾಡಿದರು.

ಪ್ರಸನ್ನಾನಂದ ಸ್ವಾಮೀಜಿ ಮೀಸಲಾತಿ ಹೆಚ್ಚಳಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು 100 ದಿನಗಳು ಕಳೆದರೂ ಸರ್ಕಾರ ಜಾಣ ಕುರುಡು ನೀತಿ ಅನುಸರಿಸುತ್ತಿದೆ. ಎಸ್ಸಿ- ಎಸ್ಟಿ ಸಮುದಾಯಗಳನ್ನು ಮತಬ್ಯಾಂಕಿಗೆ ಮಾತ್ರ ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಪಕ್ಷಗಳು ಹವಣಿಸುತ್ತಿವೆ. ಹೀಗಾಗಿ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮುಂದಾಗಬೇಕು ಇಲ್ಲದಿ ದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ತಾಹಶೀಲ್ದಾರ್‌ ಎಚ್‌. ಶ್ರೀನಿವಾಸ್‌ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು ಈ ಮನವಿ ಪತ್ರವನ್ನು ಮೇಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ತಾಲೂಕು ಅಧ್ಯಕ್ಷ ಬಾಬಣ್ಣ, ಬಿ. ಎನ್‌. ರಂಗನಾಥ್‌.ಸಿ. ಜಿ. ಗಂಗಪ್ಪ, ರಾಘವೇಂದ್ರ ಹನುಮಾನ್‌. ನರಸಿಂಹಮೂರ್ತಿ, ನಿರಂಜನ್‌, ವಕೀಲ ಬಿ. ಕೆ. ನರಸಿಂಹಮೂರ್ತಿ. ನಾಗ ರಾಜಪ್ಪ ನಾಗಾರ್ಜುನ, ಕೋಡಿರ್ಲಪ್ಪ, ತಿಮ್ಮಯ್ಯ, ರಾಘವೇಂದ್ರ, ಮದನ್‌, ಸೋಮು, ಎಚ್‌. ಎನ್‌. ಸುರೇಶ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next