Advertisement

ಯುದ್ಧ ವಿಮಾನ ದುರಂತ: ತವರೂರಿಗೆ ಬಂದ ಪೈಲಟ್ ಹನುಮಂತರಾವ್ ಸಾರಥಿ ಪಾರ್ಥಿವ ಶರೀರ

02:53 PM Jan 29, 2023 | Team Udayavani |

ಬೆಳಗಾವಿ: ಗ್ವಾಲಿಯರ್ ಸಮೀಪ ನಡೆದ ವಾಯುಪಡೆಯ ಯುದ್ಧ ವಿಮಾನಗಳ ಪತನ ವೇಳೆ ಹುತಾತ್ಮರಾದ ಪೈಲಟ್ ವಿಂಗ್ ಕಮಾಂಡರ್‌ ಬೆಳಗಾವಿಯ ಗಣೇಶಪುರದ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.

Advertisement

ಯೋಧನ ಪಾರ್ಥೀವ ಶರೀರವನ್ನು ಸೇನೆಯ‌ ವಿಶೇಷ ವಿಮಾನದ ಮೂಲಕ ರವಿವಾರ ಮಧ್ಯಾಹ್ನ 12:30 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ತರಲಾಯಿತು.

ಇದನ್ನೂ ಓದಿ:ಚಿಕ್ಕಮಗಳೂರು:ದುಬಾರಿ ಬೆಲೆಯ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿ ಪೊಲೀಸ್ ಬಲೆಗೆ

ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ. ನಿತೇಶ್ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ. ಎಂ.ಬಿ. ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ್, ಮತ್ತಿತರ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.

Advertisement

ಜಿಲ್ಲಾಧಿಕಾರಿ ನಿತೇಶ ಪಾಟೀಲ ಶ್ರದ್ಧಾಂಜಲಿ: ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರು ನಿಧನರಾದ ವಿಷಯ ತಿಳಿದು ತುಂಬ ದುಃಖವಾಯಿತು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಂತಾಪ ವ್ಯಕ್ತಪಡಿಸಿದರು.

ಹೆಮ್ಮೆಯ ಯೋಧ ಹನುಮಂತರಾವನನ್ನು ಕಳೆದುಕೊಂಡಿದ್ದು ದೇಶಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾಧಿಕಾರಿ ಪಾಟೀಲ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next