Advertisement

ವೀರಶೈವ ಮಹಾಸಭಾದಿಂದ ಹೋರಾಟ

12:48 PM Dec 23, 2021 | Team Udayavani |

ರಾಯಚೂರು: ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಅಪಮಾನ ಮಾಡಿದ ಘಟನೆ ಖಂಡನೀಯ. ನಾಡಿನಲ್ಲಿ ಮಹಾನ್‌ ನಾಯಕರಿಗೆ ಅವಮಾನ ಮಾಡುವ ಘಟನೆಗಳು ಹೆಚ್ಚಾಗುತ್ತಿದ್ದು, ಕೂಡಲೇ ಈ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖೀಲ ಭಾರತ ವೀರಶೈವ ಮಹಾಸಭೆ, ಬಸವಕೇಂದ್ರ, ವೀರಶೈವ ಸಮಾಜ, ಅಖೀಲ ಭಾರತ ಜಾಗತಿಕ ಲಿಂಗಾಯತ ಮಹಾಸಭೆ, ಶ್ರೀ ರುದ್ರಸೇನ ಮತ್ತು ಲಿಂಗವಂತ ನೌಕರರ ಸಮಾಜದ ಸಹಯೋಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

Advertisement

ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಸಮಾಜದ ಸದಸ್ಯರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಡಿಸಿ ಕಚೇರಿವರೆಗೂ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ಡಿಸಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಜಿಲ್ಲೆಯಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಅಪಮಾನ ಮಾಡಲಾಗಿದೆ. ವಿಶ್ವಗುರು ಬಸವಣ್ಣನವರು ಶಾಂತಿ ಸಂದೇಶ ಸಾರಿದ ಮಹಾನ್‌ ಶರಣರು. ಅವರನ್ನು ದೊಡ್ಡ ಸ್ಥಾನದಲ್ಲಿಟ್ಟು ಇಡೀ ವಿಶ್ವವೇ ಆರಾಧಿಸುವಾಗ ದುಷ್ಕರ್ಮಿಗಳು ಈ ರೀತಿ ಅಪಮಾನ ಮಾಡಿರುವುದು ಖಂಡನೀಯ ಎಂದು ದೂರಿದರು.

ಈ ವೇಳೆ ವೀರಶೈವ ಮಹಾಸಭಾದ ಅಧ್ಯಕ್ಷ ಚಂದ್ರಶೇಖರ್‌ ಮಿರ್ಜಾಪೂರ, ವೀರಶೈವ ಸಮಾಜದ ಅಧ್ಯಕ್ಷ ಎಂ.ವೀರನಗೌಡ, ರಾಮನಗೌಡ, ಕೆ.ವೀರಭದ್ರಪ್ಪ, ಜೆ.ಬಸವರಾಜ, ಚೆನ್ನಬಸವಣ್ಣ, ಯುವ ಘಟಕದ ಅಧ್ಯಕ್ಷ ಶಿವಶರಣ ಅರಕೇರಾ, ನಾಗಯ್ಯ ಸ್ವಾಮಿ ಹಂಚಿನಾಳ ಸೇರಿದಂತೆ ಅನೇಕರು ಮುಖಂಡರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next