Advertisement

ಇಂಗ್ಲಿಷ್‌ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲದೆ ಪರದಾಟ

01:48 AM Mar 14, 2019 | Team Udayavani |

ಬೆಂಗಳೂರು: ಇಂಗ್ಲಿಷ್‌ ಐಚ್ಛಿಕ ವಿಷಯವಾಗಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಬಿ.ಇಡಿ ಪೂರೈಸಿದವರಿಗೆ ಸರ್ಕಾರದ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ಇಂಗ್ಲಿಷ್‌ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ರಾಜ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿ ಖಾಲಿ 10611 ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಇಂಗ್ಲಿಷ್‌ ಐಚ್ಛಿಕ ವಿಷಯವಾಗಿ ಅಧ್ಯಯನ ಮಾಡಿದ ಸಾವಿರಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.

Advertisement

ಪದವಿಯಲ್ಲಿ ಇಂಗ್ಲಿಷ್‌,ಪತ್ರಿಕೋದ್ಯಮ ಹಾಗೂ ಮನ:ಶಾಸ್ತ್ರಅಥವಾ ಇಂಗ್ಲಿಷ್‌, ಪತ್ರಿಕೋದ್ಯಮ ಹಾಗೂ ಅರ್ಥಶಾಸ್ತ್ರಅಥವಾ ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ,ಮನೋವಿಜ್ಞಾನ, ಸಸ್ಯಶಾಸ್ತ್ರ , ಪ್ರಾಣಿಶಾಸ್ತ್ರ , ಶಿಕ್ಷಣ ಶಾಸ್ತ್ರಹೀಗೆ ಹಲವು ಐಚ್ಛಿಕ ವಿಷಯವಾಗಿ ಅಧ್ಯಯನ ಮಾಡಿ, ಐಚ್ಛಿಕ ವಿಷಯಗಳಲ್ಲೊಂದರಲ್ಲಿ ಸ್ನಾತಕೋತ್ತರ ಪದವಿ ಪಡೆದು, ಮತ್ತೆ ಇಂಗ್ಲಿಷ್‌ನಲ್ಲಿ ಬಿ.ಇಡಿ ಕೋರ್ಸ್‌ ಪೂರೈಸಿದ ಅಭ್ಯರ್ಥಿಗಳು ಸರ್ಕಾರಿ ಶಾಲಾ ಇಂಗ್ಲಿಷ್‌ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಇಂಗ್ಲಿಷ್‌ನಲ್ಲಿ ಎಲ್ಲ ರೀತಿಯ ಪದವಿ ಹಾಗೂ ಅರ್ಹತೆ ಪಡೆದಿದ್ದರೂ, ಸರ್ಕಾರ ನಿಯಮ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅಡ್ಡಿ ಬರುತ್ತಿದೆ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಗ್ಲಿಷ್‌, ಪತ್ರಿಕೋದ್ಯಮ ಹಾಗೂ ಮನಶಾಸ್ತ್ರ ಇತ್ಯಾದಿ ಕಾಂಬಿನೇಷನ್‌ ಪಡೆದ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದರೆ ಇದು ಯಾವ ರೀತಿಯ ನ್ಯಾಯ ಎಂದು ಅಭ್ಯರ್ಥಿಗಳು ಪ್ರಶ್ನಿಸಿದ್ದಾರೆ.

ಶಿಕ್ಷಕರ ನೇಮಕಾತಿ ಸಂಬಂಧ ಸರ್ಕಾರವು ರೂಪಿಸಿರುವ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ಇಂಗ್ಲಿಷ್‌, ಪತ್ರಿಕೋದ್ಯಮ ಹಾಗೂ ಮನಶಾಸ್ತ್ರವನ್ನು ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಪಡೆದ ಅಭ್ಯರ್ಥಿಗಳಿಗೆ ಇಂಗ್ಲಿಷ್‌ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿಲ್ಲ. ಪದವಿಯ ಐಚ್ಛಿಕ ವಿಷಯದ ಆಧಾರದಲ್ಲಿ ನೇಮಕಾತಿ ನಡೆಯುತ್ತದೆ. ಸರ್ಕಾರದ ನಿಯಮದಂತೆ ನೇಮಕಾತಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next