Advertisement

ಮಡಿಕೇರಿ: ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

07:04 PM Jan 12, 2023 | Team Udayavani |

ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Advertisement

ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್‌ ನಾಯಕ್‌ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ಮನೋಹರ್‌ ನಾಯಕ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಕೊಡಗು ಮಹಿಳಾ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಶಾಲಾ ಆಡಳಿತ ಮಂಡಳಿ ಮನೋಹರ್‌ ನಾಯಕ್‌ನನ್ನು ಅಮಾನತುಗೊಳಿಸಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next