Advertisement

ಬಾಲ್ಯ ವಿವಾಹ ಪ್ರಚೋದಿಸಿದವರ ವಿರುದ್ಧ ದೂರು ದಾಖಲಿಸಿ

03:45 PM Aug 08, 2020 | mahesh |

ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ 160ಕ್ಕೂ ಹೆಚ್ಚು ಬಾಲ್ಯವಿವಾಹಗಳಿಗೆ ಯತ್ನ, ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗಿರುವುದು ಆತಂಕ ಮೂಡಿಸಿದೆ ಎಂದು ಜಿಲ್ಲಾ ಧಿಕಾರಿ ಎಸ್‌.ಎಸ್‌. ನಕುಲ್‌ ಬೇಸರ ವ್ಯಕ್ತಪಡಿಸಿದರು.

Advertisement

ನಗರದ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕದ ವತಿಯಿಂದ ಬಾಲ್ಯ ವಿವಾಹ ನಿಷೇಧ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ಸಲುವಾಗಿ ಏರ್ಪಡಿಸಲಾಗಿದ್ದ ಜನಜಾಗೃತಿ ಜಾಥಾ ವಾಹನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಏಪ್ರಿಲ್‌ ತಿಂಗಳಲ್ಲಿ ಇಲ್ಲಿಯವರೆಗೆ 150 ಬಾಲ್ಯ ವಿವಾಹಗಳು ತಡೆಗಟ್ಟಲಾಗಿದೆ. 13 ಬಾಲ್ಯ ವಿವಾಹ ದೂರು ದಾಖಲಿಸಲಾಗಿದೆ. 30 ಪೊಕ್ಸೋ ಪ್ರಕರಣಗಳು, 5 ಮಹಿಳಾ ದೌರ್ಜನ್ಯಕ್ಕೆ ಒಳಗಾದ ಪ್ರಕರಣಗಳು ಅಧಿಕಾರಿಗಳ ಗಮನಕ್ಕೆ ಬಂದಿದ್ದು ಇವುಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹಗಳಿಗೆ ಪ್ರಚೋದಿಸುವವರ ಹಾಗೂ ವಿವಾಹದ ಸಂದರ್ಭದಲ್ಲಿ ಪಾಲ್ಗೊಂಡವರ ವಿರುದ್ಧ ದೂರು ದಾಖಲಿಸಿ ಕ್ರಮಕೈಗೊಳ್ಳಬೇಕು. ಜತೆಗೆ ಜನರಲ್ಲಿ
ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾಗೆ ಚಾಲನೆ ನೀಡಲಾಗಿದೆ ಎಂದವರು ವಿವರಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌
ನ್ಯಾಯಾಧೀಶ ಅರ್ಜುನ್‌ ಎಸ್‌. ಮಲ್ಲೂರ್‌ ಮಾತನಾಡಿದರು. ಜಾಗೃತಿ ಜಾಥಾ ವಾಹನ ಜಿಲ್ಲೆಯ 11 ತಾಲೂಕುಗಳಲ್ಲಿ 16 ದಿನಗಳ ಕಾಲ ಮೊಬೈಲ್‌ ಧ್ವನಿವರ್ಧಕ, ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್‌. ನಾಗರಾಜ, ಕರ್ನಾಟಕ ರಾಜ್ಯ ಮಕ್ಕಳ ಆಯೋಗದ ಸದಸ್ಯ ಎಚ್‌.ಸಿ. ರಾಘವೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾಧಿ ಕಾರಿ ಸೈಯಾದ್‌ ಚಾಂದ್‌ಪಾಶಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಲಕ್ಷ್ಮೀ ಮೈದೂರು ಹಾಗೂ ಸದಸ್ಯ ಮಂಜುನಾಥ್‌,
ಬಾಲ ಕಾರ್ಮಿಕ ಯೋಜನಾ ಧಿಕಾರಿ ಮೌನೇಶ್‌, ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಉಷಾ, ಜಲಾಲಪ್ಪ, ರಾಜನಾಯ್ಕ, ನಾಗವೇಣಿ, ಮಕ್ಕಳ ರಕ್ಷಾಣಾಧಿ ಕಾರಿ ಚನ್ನಬಸಪ್ಪ, ಗಂಗಾಧರ.ಡಿ, ಮಕ್ಕಳ ಸಹಾಯವಾಣಿ ಸಂಯೋಜಕರು ಹಾಗೂ ಇಲಾಖೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next