Advertisement

24ರಿಂದ ಕಡತ ವಿಲೇವಾರಿ ಸಪ್ತಾಹ

10:34 PM Jun 22, 2019 | Lakshmi GovindaRaj |

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಜೂನ್‌ 24 ರಿಂದ 30ರವರೆಗೆ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ ಆಚರಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಅವಧಿಯಲ್ಲಿ ಸಾಮಾನ್ಯ ಕಡತಗಳ ಜತೆಗೆ ದೀರ್ಘ‌ ಕಾಲದಿಂದ ಬಾಕಿ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡಲಾಗುವುದು. ಕಡತಗಳ ಶೀಘ್ರ ವಿಲೇವಾರಿಯಲ್ಲಿ ಕಡ್ಡಾಯವಾಗಿ ಪಾರದರ್ಶಕತೆ ಹಾಗೂ ನಿಯಮ ಪಾಲನೆಯನ್ನು ಕಾಯ್ದುಕೊಳ್ಳಲಾಗುವುದು. ಕಡತಗಳನ್ನು ಯಾವ ರೀತಿ ವಿಲೇವಾರಿ ಮಾಡಬೇಕೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರಾದೇಶಿಕ ಆಯುಕ್ತರು ಮತ್ತು ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಪ್ತಾಹದ ಕೊನೆಯ ದಿನವಾದ ಜೂ.30ರ ನಂತರ ಎಲ್ಲ ಅಧಿಕಾರಿಗಳು ಸಪ್ತಾಹದ ಆರಂಭದಲ್ಲಿ ಬಾಕಿ ಇದ್ದ ಕಡತಗಳು, ಸಪ್ತಾಹದ ಅವಧಿಯಲ್ಲಿ ವಿಲೇವಾರಿ ಮಾಡಲಾದ ಮತ್ತು ಅಂತ್ಯದಲ್ಲಿ ಬಾಕಿಯಿರುವ ಕಡತಗಳ ವಿವರವನ್ನು ಕ್ರೋಢೀಕರಿಸಿ ಜುಲೈ 2ರ ಒಳಗೆ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿಂದೆಯೂ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ ನಡೆಸಿ 2.50 ಲಕ್ಷಕ್ಕೂ ಅಧಿಕ ಕಡತಗಳ ವಿಲೇವಾರಿ ಮಾಡಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next