Advertisement
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು 26ರಂದು ರಾಜೀನಾಮೆ ನೀಡುವವರೆಗೆ ಅಶ್ವತ್ಥನಾರಾಯಣ ಅವರು ತಮ್ಮ ಇಲಾಖೆಗಳಲ್ಲಿದ್ದ ಎಲ್ಲ ಕಡತಗಳನ್ನು ವಿಲೇವಾರಿ ಮಾಡಿ, ಬಾಕಿ ಕಡತಗಳ ಪ್ರಮಾಣವನ್ನು ಶೂನ್ಯಕ್ಕೆ ತಂದಿದ್ದಾರೆ.
Related Articles
Advertisement
ಎಲೆಕ್ಟ್ರಾನಿಕ್ಸ್ ಮತ್ತು ಐಟಿ-ಬಿಟಿ ಇಲಾಖೆಯಲ್ಲಿ 62 ಮ್ಯಾನುಯಲ್ ಕಡತಗಳು, 86 ಇ-ಕಡತಗಳು ಮಾಜಿ ಡಿಸಿಎಂ ಅವರಿಂದ ವಿಲೇವಾರಿ ಆಗಿವೆ. ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ 84 ಮ್ಯಾನುಯಲ್ ಕಡತಗಳು, 96 ಇ-ಕಡತಗಳು ಬಂದಿದ್ದವು. ವೈದ್ಯಕೀಯ ಶಿಕ್ಷಣ ಇಲಾಖೆಗೆ ಬಂದಿದ್ದ 245 ಮ್ಯಾನುಯಲ್ ಕಡತಗಳನ್ನೂ ಡಾ.ಅಶ್ವತ್ಥನಾರಾಯಣ ಅವರು ಕ್ಲಿಯರ್ ಮಾಡಿದ್ದಾರೆ.
ಒಟ್ಟಾರೆಯಾಗಿ ಅವರು 2,137 ಮ್ಯಾನುಯಲ್ ಕಡತಗಳು, 1,633 ಇ-ಕಡತಗಳನ್ನು ಬಾಕಿ ಇಟ್ಟುಕೊಳ್ಳದೇ ವಿಲೇವಾರಿ ಮಾಡಿದ್ದಾರೆ.
ಇದನ್ನೂ ಓದಿ:ಮತ್ತೆ ಪುಟಿದೆದ್ದ ವಹಿವಾಟು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 209 ಅಂಕ ಏರಿಕೆ
ಯಾವುದೇ ಕೆಲಸವನ್ನು ಬಾಕಿ ಇಟ್ಟುಕೊಳ್ಳುವುದು ನನ್ನ ಜಾಯಮಾನವಲ್ಲ. ಬಂದ ಕಡತವನ್ನೂ ಅಧಿಕಾರಿಗಳ ಜತೆ ಚರ್ಚೆ ಮಾಡಿ ಸಾಧ್ಯವಾದಷ್ಟು ತ್ವರಿತವಾಗಿ ಕ್ಲಿಯರ್ ಮಾಡಿದ್ದೇನೆ. ಪ್ರವಾಸವಿದ್ದಾಗ ಒಂದು ಅಥವಾ ಎರಡು ದಿನ ತಡವಾಗಿರುವುದು ಬಿಟ್ಟರೆ ಬಾಕಿ ಇಟ್ಟುಕೊಳ್ಳುವ ಪ್ರಶ್ನೆಯೇ ಇರಲಿಲ್ಲ. ಇ-ಆಫೀಸ್ ವ್ಯವಸ್ಥೆಯಿಂದ ಅನೇಕ ಫೈಲುಗಳು ವೇಗವಾಗಿ ವಿಲೇವಾರಿ ಆಗಿವೆ. ಇದರಿಂದ ನಾನು ನಿರ್ವಹಣೆ ಮಾಡುತ್ತಿದ್ದ ಎಲ್ಲ ಇಲಾಖೆಗಳಲ್ಲಿ ಕ್ಷಮತೆ ಹೆಚ್ಚಾಗಿದೆ. ಕಡತ ವಿಲೇವಾರಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಸಂಬಂಧ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಆಸಕ್ತಿ ತೋರಿದ್ದು ಇದು ಒಳ್ಳೆ ಬೆಳವಣಿಗೆ. ಇದರಿಂದ ಪಾರದರ್ಶಕತೆ ಬರುತ್ತೆ ಎಂಬುದು ನನ್ನ ನಂಬಿಕೆ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.