Advertisement
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಕೆ.ಆರ್.ಸರ್ಕಲ್‌ನ ಬೆಸ್ಕಾಂ ಕಚೇರಿಯ ವ್ಯವಸ್ಥಾಪಕ ನಿರ್ದೇಶಕರು, ಉತ್ತರ ವಲಯದ ಬೆಸ್ಕಾಂನ ಮುಖ್ಯ ಎಂಜಿನಿಯರ್, ಪೂರ್ವ ವೃತ್ತದ ಬೆಸ್ಕಾಂನ ಅಧೀಕ್ಷಕ ಎಂಜಿನಿಯರ್, ವೈಟ್‌ಫೀಲ್ಡ್ ವಿಭಾಗದ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್, ವೈಟ್‌ಫೀಲ್ಡ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಕೊಳ್ಳಲಾಗಿದೆ.
Related Articles
Advertisement
ಬೆಂಗಳೂರು: ತಾಯಿ, ಮಗು ಬಲಿ ಪಡೆದ ವಿದ್ಯುತ್ ಅವಘಡ ಪ್ರಕರಣದ ಬಗ್ಗೆ ಸಬೂಬುಗಳನ್ನು ಹೇಳುವುದು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ.
ತನಿಖೆಗೆ 4 ಸಮಿತಿ ರಚಿಸಿರುವುದಾಗಿ ಜಾರ್ಜ್ ಅವರೇ ಹೇಳಿದ್ದಾರೆ. ತನಿಖೆ ಮುಗಿದು ವರದಿ ಕೈ ಸೇರುವ ಮೊದಲೇ ಇಲಿ ಮೇಲೆ ಎತ್ತಿಹಾಕು ತ್ತಿರುವ ಹಿಂದಿನ ಉದ್ದೇಶವಾದರೂ ಏನು? ತನಿಖೆಯ ಹಾದಿ ತಪ್ಪಿಸುವ ಯತ್ನ ನಡೆಸುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಹೀಗೆಯೇ ವರದಿ ನೀಡಲಿ ಎಂದು ಪರೋಕ್ಷವಾಗಿ ತನಿಖಾ ಸಮಿತಿಗಳ ಮೇಲೆ ಒತ್ತಡ ಹೇರಿದಂತೆ ಅಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ಸಿಎಂ ಮಧ್ಯ ಪ್ರವೇಶಕ್ಕೆ ಆಗ್ರಹ: ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮೌನ ವಹಿಸುವುದು ಸರಿಯಲ್ಲ. ತಕ್ಷಣವೇ ಮಧ್ಯಪ್ರವೇಶಿಸಿ ಸಚಿವ ಜಾರ್ಜ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ನ್ಯಾಯ ಸಿಗುವ ತನಕ ಹೋರಾಟ: ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಕೊಲೆಗಡುಕ ಸರ್ಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ನಡೆಸಲಾಗುವುದು. ಇಂಧನ ಸಚಿವರ ರಾಜೀನಾಮೆ ಪಡೆದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ತನಕ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಾಗುವುದು ಎಂದು ಅಶೋಕ ಎಚ್ಚರಿಸಿದ್ದಾರೆ.