Advertisement

‘ಪಾಕಿಸ್ತಾನ್ ಜಿಂದಾಬಾದ್’ ಎಂದ ಕಿಡಿಗೇಡಿಗಳ ವಿರುದ್ಧ ದೂರು ದಾಖಲು

09:48 PM May 14, 2023 | Team Udayavani |

ಬೆಳಗಾವಿ: ವಿಧಾನಸಭಾ ಚುನಾವಣೆ ಮತ ಎಣಿಕೆ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಅಭ್ಯರ್ಥಿ ಪರ ಗೆಲುವಿನ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ನಗರದ ಆರ್‌ಪಿಡಿ ಕ್ರಾಸ್ ಬೆಳೆಯ ಬ್ಯಾರಿಕೇಡ್ ಹಾಕಿ ಜನರನ್ನು ತಡೆದಿದ್ದ ಸಂದರ್ಭದಲ್ಲಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ವೇಳೆ ಯುವಕನೋರ್ವ ಜಿಂದಾಬಾದ್ ಜಿಂದಾಬಾದ್ ಎಂದು ಕೂಗಿದಾಗ ಇನ್ನುಳಿದ ಯುವಕರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ಎಲ್ಲ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಚಳಕೊಡಿ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next