Advertisement

ಕೆರೆ ಒತ್ತುವರಿ ತೆರವುಗೊಳಿಸಿ ನೀರು ತುಂಬಿಸಿ

01:25 PM Feb 05, 2022 | Team Udayavani |

ರಾಯಚೂರು: ಬೇಸಿಗೆಯಲ್ಲಿ ಉಲ್ಬಣಿಸುವ ಕುಡಿಯುವ ನೀರಿನ ಬವಣೆ ನೀಗಿಸುವುದರ ಜತೆಗೆ ಅಂತರ್ಜಲ ಹೆಚ್ಚಿಸಲು ಜಿಲ್ಲೆಯ ಕೆರೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್‌ ಸಂಘದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

Advertisement

ಜಿಲ್ಲೆಯಲ್ಲಿ 125ಕ್ಕೂ ಹೆಚ್ಚು ಕೆರೆಗಳಿವೆ. ಅದರಲ್ಲಿ ಸಾಕಷ್ಟು ಕೆರೆಗಳು ಒತ್ತುವರಿ ಯಾಗಿದ್ದು, ಕೂಡಲೇ ತೆರವಿಗೆ ಕ್ರಮ ವಹಿಸಬೇಕು. ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಬೇಸಿಗೆ ಬಹಳ ಭೀಕರವಾಗಿರುತ್ತದೆ. ಆಗ ಅನೇಕ ಗ್ರಾಮಗಳಲ್ಲಿ ನೀರಿನ ಕೊರತೆ ಹೆಚ್ಚಾಗಿ ಕಾಡುತ್ತಿದೆ. ಅನೇಕ ಗ್ರಾಮಗಳ ಕುಡಿಯುವ ನೀರಿಗೆ ಕೆರೆಗಳನ್ನೇ ಜನರು ಅವಲಂಭಿಸಿದ್ದಾರೆ. ಕೆರೆಗಳ ಭರ್ತಿಯಿಂದ ಅಂತರ್ಜಲ ಮಟ್ಟವೂ ವೃದ್ಧಿಯಾಗುತ್ತದೆ ಎಂದರು.

ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಉಪಯೋಗವಾಗು ವಂತೆ ವ್ಯವಸ್ಥೆ ಮಾಡಬೇಕು. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾ ಧಿ ಕಾರದ ಜಿಲ್ಲಾ ಸಮಿತಿ ಕೆರೆಗಳ ಒತ್ತುವರಿ ಕುರಿತು ವರದಿ ಸಿದ್ಧಪಡಿಸಬೇಕು. ಕೆರೆಗಳಿಗೆ ನೀರು ಹರಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆರೆಗಳ ಸರ್ವೇ ನಡೆಸಿ ಗಡಿ ಗುರುತಿಸಬೇಕು, ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಬೇಕು. 30 ದಿನದೊಳಗೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘದ ಜಿಲ್ಲಾಧ್ಯಕ್ಷ ಕೆ.ರಂಗನಾಥ ಪಾಟೀಲ್‌, ಮಂಜುನಾಥ ದಳವಾಯಿ, ರಮೇಶ ಆಳಮಳಿ, ಗೂಳಪ್ಪಗೌಡ ಜೇಗರಕಲ್‌, ಹನುಮಂತರಾಯ ನಾಯಕ, ಶಂಕರಗೌಡ ಪೊಲೀಸ್‌ ಪಾಟೀಲ್‌, ಮಲ್ಲಿಕಾರ್ಜುನಗೌಡ, ರಾಘವೇಂದ್ರ ಸೇರಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next