ಗದಗ: ಬೆಳಗಾವಿ ಅಧಿವೇಶನದಲ್ಲಿ ಆರ್ಥಿಕ ಇಲಾಖೆ ಯೊಂದಿಗೆ ಚರ್ಚಿಸಿ 2,500 ಪಿಯು ಕಾಲೇಜು ಉಪನ್ಯಾಸಕರ ನೇಮ ಕಾತಿಗೆ ಆದೇಶ ಹೊರಡಿಸಲಾಗು ವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಪದವಿ ಪೂರ್ವ ನೌಕರರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, 2015ರಿಂದ 2023ರ ವರೆಗೆ ಸುಮಾರು 8,000 ಶಿಕ್ಷಕರ ಕೊರತೆಯಾಗಿದೆ.
2020ರ ವರೆಗೆ ಖಾಲಿಯಿರುವ ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಈಗಾಗಲೇ ಆರ್ಥಿಕ ಇಲಾಖೆ 15,000 ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೇ, 13,500 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಉಳಿದ 1,500 ಮತ್ತು ಹೆಚ್ಚುವರಿಯಾಗಿ 1,000 ಸಹಿತ ಒಟ್ಟು 2,500 ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಲಾ ಶಿಕ್ಷಣ ಇಲಾಖೆಯಲ್ಲಿ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು ಸಹಿತ ರಾಜ್ಯದಲ್ಲಿ 76 ಸಾವಿರ ಶಾಲೆಗಳಲ್ಲಿ 1.20 ಕೋಟಿ ಮಕ್ಕಳಿದ್ದಾರೆ. 1,200 ಸರಕಾರಿ, 1,000 ಅನುದಾನಿತ ಹಾಗೂ ಅನುದಾನ ರಹಿತ 2,000 ಶಾಲೆಗಳಿವೆ. ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯನ್ನು ಸಂಪೂರ್ಣವಾಗಿ ಜಿ.ಪಂ.ಗೆ ಹಸ್ತಾಂ ತರಿಸುವುದಿಲ್ಲ ಎಂದು ಹೇಳಿದರು.
ಡಯಟ್‌ಗೆ ಕಾಯಕಲ್ಪ
ಶಾಲಾ ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳು ಹೆಚ್ಚಿದ್ದು, ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಅಲ್ಲದೆ, ಡಯಟ್ ಅನ್ನು ಉತ್ತೇಜಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಡಯಟ್‌ನಲ್ಲಿ ನಡೆಯುವ ತರಬೇತಿಯಲ್ಲಿ ಮಕ್ಕಳ ಭವಿಷ್ಯ ಅಡಗಿರುತ್ತದೆ. ಸದ್ಯ ಡಯಟ್ ಅನ್ನು ಸಂಪೂರ್ಣ ಹಾಳು ಮಾಡಲಾಗಿದೆ.