Advertisement
ಈ ಬಗ್ಗೆ ಎಕ್ಸ್‌ನಲ್ಲಿ ನಟಿ ಕಂಗನಾ ಪೋಸ್ಟ್ ಮಾಡಿ “ನಮ್ಮ ಚಿತ್ರ ಎಮರ್ಜೆನ್ಸಿಗೆ ಸೆನ್ಸಾರ್ ಪ್ರಮಾಣಪತ್ರ ಸ್ವೀಕರಿಸಿದ್ದೇವೆ ಎಂದು ತಿಳಿಸಲು ಸಂತಸವೆನಿಸಿದೆ. ಶೀಘ್ರದಲ್ಲೇ ಚಿತ್ರ ಬಿಡುಗಡೆಯ ದಿನಾಂಕ ಪ್ರಕಟಿಸುತ್ತವೆ. ತಾಳ್ಮೆಯಿಂದ ಕಾದಿದ್ದಕ್ಕೆ, ಬೆಂಬಲಿಸಿದ್ದಕ್ಕೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಅಕ್ಟೋಬರ್ ತಿಂಗಳಾಂತ್ಯ ಅಥವಾ ನವೆಂಬರ್ ಎರಡನೇ ವಾರದಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.
ಎಮರ್ಜೆನ್ಸಿ’ ಚಿತ್ರದ ಟ್ರೇಲರ್ ವಿವಾದ
ತುರ್ತು ಪರಿಸ್ಥಿತಿಯ ಟ್ರೇಲರ್ ಬಿಡುಗಡೆಯಾದಾಗ ‘ಎಮರ್ಜೆನ್ಸಿ’ ಚಿತ್ರದ ವಿವಾದವು ಆರಂಭವಾಗಿ ಇದು ಖಲಿಸ್ತಾನ್ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಪ್ರತ್ಯೇಕ ಸಿಖ್ ರಾಜ್ಯಕ್ಕಾಗಿ ಇಂದಿರಾ ಗಾಂಧಿಪಕ್ಷ ಬೆಂಬಲಿಸುವ ಭರವಸೆ ತೋರಿಸುತ್ತದೆ. ಇದರಿಂದ ಕುಪಿತಗೊಂಡ ದೆಹಲಿಯ ಶಿರೋಮಣಿ ಅಕಾಲಿದಳವು ಸಿಖ್ಖರ ಖಳನಾಯಕರಂತೆ ಚಿತ್ರಿಸಲಾಗಿದೆ ಎಂಬ ಕಾರಣದಿಂದ ಸಿನಿಮಾ ನಿಷೇಧಕ್ಕೆ ಸಿಬಿಎಫ್‌ಸಿಗೆ ಲೀಗಲ್ ನೋಟಿಸ್ ಕಳುಹಿಸಿತ್ತು.
Related Articles
Advertisement
ಇಂದಿರಾ ಗಾಂಧಿ ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳ ಪ್ರಮುಖ ವಿಷಯವಾಗಿಟ್ಟುಕೊಂಡು ‘ಎಮರ್ಜೆನ್ಸಿʼ ಸಿನಿಮಾ ಮಾಡಲಾಗಿದೆ. ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ ಕಂಗನಾ ರಣಾವತ್ ವೇಷಭೂಷಣ ಗಮನ ಸೆಳೆದಿದೆ. ಸಿನಿಮಾ ಬಿಡುಗಡೆ ಆದ ಬಳಿಕವೂ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಹಲವು ಕರಣಗಳಿಂದಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಸೃಷ್ಟಿಸಿದೆ.