Advertisement
ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಗರದ ಬಿ.ಬಿ ರಸ್ತೆಯ ಬಾಲಾಜಿ ಚಿತ್ರ ಮಂದಿರದಲ್ಲಿ ಶುಕ್ರವಾರ ಮಕ್ಕಳ ಚಲನ ಚಿತ್ರೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
Related Articles
Advertisement
ಉತ್ತಮ ಅಂಶ ಪಾಲಿಸಿ: ಚಿಕ್ಕಬಳ್ಳಾಪುರ ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಮಾತನಾಡಿ, ಮಕ್ಕಳ ಮನಸ್ಸಿನಲ್ಲಿ ಉಂಟಾಗುವ ಒತ್ತಡವನ್ನು ದೂರಮಾಡಿ ಸರಿ ದಾರಿಯಲ್ಲಿ ನಡೆಯುವಂತೆ ತಿದ್ದುವ ಕೆಲಸವನ್ನು ಸಿನಿಮಾ ಮಾಡುತ್ತವೆ. ಮಕ್ಕಳು ಚಿತ್ರದಲ್ಲಿರುವ ಉತ್ತಮ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಜೀವನದಲ್ಲಿ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಶಿಕ್ಷಣ ಇಲಾಖೆ ಪ್ರತಿ ವರ್ಷ ಮಕ್ಕಳಿಗೆ ಚಿತ್ರೋತ್ಸವವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಕೇವಲ ಚಿತ್ರ ಮಂದಿರಗಳಲ್ಲಿ ಮಾತ್ರ ಚಿತ್ರ ವೀಕ್ಷಣೆ ಮಾಡದೇ ಶಾಲೆಗಳಲ್ಲಿ ಕೂಡ ತಿಂಗಳಿಗೊಮ್ಮೆ ಶಿಕ್ಷಕರು ಮಾನವೀಯ ಘಟನೆಗಳನ್ನು ಆಧಾರಿಸಿ ಚಿತ್ರೀಕರಿಸಿರುವ ಸಿನಿಮಾಗಳನ್ನು ಮಕ್ಕಳಿಗೆ ತೋರಿಸುವುದರಿಂದ ಅವರಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಮನ ಪರಿವರ್ತನೆ: ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶಾಂತಲಾ ಮಾತಾನಾಡಿ, ಇಂದಿನ ಸಮಾಜದಲ್ಲಿ ನೈತಿಕ ಹಾಗೂ ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಈ ದಿನಗಳಲ್ಲಿ ಮಕ್ಕಳಲ್ಲಿ ಚಿಕ್ಕ ವಯಸ್ಸಿಗೆ ಒಳ್ಳೆಯ ಸಂಸ್ಕೃತಿ, ಸಂಸ್ಕಾರ ಕಲಿಸುವಂತಹ ಚಿತ್ರಗಳನ್ನು ತೋರಿಸುವುದರಿಂದ ಅವರ ಮನ ಪರಿವರ್ತನೆ ಆಗುತ್ತದೆ. ಇದರಿಂದ ಅವರು ಸಮಾಜದಲ್ಲಿ ಉನ್ನತಿ ಹೊಂದಲು ಅನುಕೂಲವಾಗುತ್ತದೆ ಎಂದರು. ಚಿತ್ರಗಳು ಕೇವಲ ಕಲಾತ್ಮಕವಾಗಿ ಇರದೇ ಹೃದಯಕ್ಕೆ ನಾಟುವಂತ ನೈಜ ಘಟನೆಗಳನ್ನು ಆಧಾರಿಸಿರುವ ಚಿತ್ರಗಳನ್ನು ಮಕ್ಕಳಿಗೆ ತೋರಿಸಬೇಕೆಂದರು.
ಮಕ್ಕಳ ಚಿತ್ರ ಸಂಸ್ಥೆಯ ವ್ಯವಸ್ಥಾಪಕ ಎಸ್.ರಮೇಶ್, ಬಾಲಾಜಿ ಚಿತ್ರಮಂದಿರದ ವ್ಯವಸ್ಥಾಪಕ ವೇಣು, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಚಿತ್ರಮಂದಿರದ ಸಿಬ್ಬಂದಿ, ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಮಕ್ಕಳ ಚಿತ್ರೋತ್ಸವದಲ್ಲಿ ಪಾಲ್ಗೊಂಡಿದ್ದರು.
13 ಚಿತ್ರ ಮಂದಿರಗಳಲ್ಲಿ ಚಿತ್ರೋತ್ಸವ: ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯ ಆರು ತಾಲೂಕಿನ 13 ಚಲನ ಚಿತ್ರಮಂದಿರಗಳಲ್ಲಿ ಜುಲೈ 12 ರಿಂದ 18 ರವರೆಗೆ (ಭಾನುವಾರ ಹೊರತುಪಡಿಸಿ) ಬೆಳಗ್ಗೆ 8 ರಿಂದ 10 ರವರೆಗೆ ಚಲನ ಚಿತ್ರಗಳು ಪ್ರದರ್ಶನಗೊಳ್ಳಲಿವೆ. 3ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರೋತ್ಸವ ವೀಕ್ಷಣೆಗೆ ಆದ್ಯತೆ ನೀಡಲಾಗಿದೆ. ಒಬ್ಬ ವಿದ್ಯಾರ್ಥಿಗೆ 15 ರೂ. ಶುಲ್ಕ ನಿಗದಿಪಡಿಸಲಾಗಿದೆ. ನಿತ್ಯ 8,255 ಶಾಲಾ ಮಕ್ಕಳು ವಿವಿಧ ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
ಪುಟಾಣಿ ಸಫಾರಿ, ರಾಮರಾಜ್ಯ ಚಿತ್ರ ಪ್ರದರ್ಶನ: ಜಿಲ್ಲಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದಲ್ಲಿ ರಾಜ್ಯ ಮಕ್ಕಳ ಚಿತ್ರ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಚಲನಚಿತ್ರೋತ್ಸವದಲ್ಲಿ ಪ್ರತಿ ದಿನ ಪುಟಾಣಿ ಸಫಾರಿ ಹಾಗೂ ರಾಮರಾಜ್ಯ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಆರತಿ ತಿಳಿಸಿದರು. ವಿದ್ಯಾರ್ಥಿಗಳು ಕೇವಲ ಸಿನಿಮಾವನ್ನು ವೀಕ್ಷಣೆಗೆ ಸೀಮಿತಗೊಳಿಸದೇ ಅವುಗಳಲ್ಲಿನ ಒಳ್ಳೆಯ ವಿಚಾರಗಳನ್ನು ನಿತ್ಯ ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದರು.