Advertisement

KMF 487 ಹುದ್ದೆಗೆ ಅಂತಿಮ ಪಟ್ಟಿ: ಹೈಕೋರ್ಟ್‌ ತಡೆ ತೆರವು

11:03 PM Apr 20, 2023 | Team Udayavani |

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) 487 ವಿವಿಧ ಹುದ್ದೆಗಳ ನೇಮಕಾತಿ ಕುರಿತ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ವಿಧಿಸಿದ್ದ ಮಧ್ಯಾಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸಹಿತ ಐದು ಸಂಘಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್‌ ಕಮಾಲ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ತಡೆಯಾಜ್ಞೆಯನ್ನು ತೆರವುಗೊಳಿಸಿದೆ.
ಅಲ್ಲದೆ, ನೇಮಕಾತಿಗೆ ಸಂಬಂಧಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ, ನೇಮಕಾತಿ ಆದೇಶ ನೀಡಲು ಅನುಮತಿ ನೀಡಿದೆ. ಆದರೆ ಆಯ್ಕೆ ಪಟ್ಟಿ ಪ್ರಕಟ ಮತ್ತು ನೇಮಕಾತಿ ಆದೇಶ ಎಲ್ಲವೂ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಡಿ.ಆರ್‌.ರವಿಶಂಕರ್‌, ನೇಮಕದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ. ಲಿಖೀತ ಪರೀಕ್ಷೆಯಲ್ಲಿ ಕನ್ನಡವೂ ಒಂದು ವಿಷಯವಾಗಿದೆ. ಆದರೆ ನೇಮಕ ಪರೀಕ್ಷೆಗಳನ್ನು ನಡೆಸಿ ಅನುಭವ ಇಲ್ಲದ, ಕನ್ನಡ ಜ್ಞಾನವಿಲ್ಲದ ಗುಜರಾತ್‌ನ ಇನ್‌ಸ್ಟಿಟ್ಯೂಟ್‌ ಆಫ್ ರೂರಲ್‌ ಮ್ಯಾನೇಜ್‌ಮೆಂಟ್‌ಗೆ ಅವಕಾಶ ನೀಡಲಾಗಿದೆ. ಅದಕ್ಕೂ ಮುಖ್ಯವಾಗಿ ಲಿಖೀತ ಪರೀಕ್ಷೆಯ ಫ‌ಲಿತಾಂಶವನ್ನು ಸಂದರ್ಶಕರಿಗೆ ನೀಡಿದ್ದಾರೆ. ಇದು ನಿಯಮಬಾಹಿರ. ಹಾಗಾಗಿ ತಡೆ ನೀಡಬೇಕು ಎಂದು ಕೋರಿದರು. ಅಲ್ಲದೆ, ಂಕಗಳನ್ನು ತಿದ್ದಲಾಗಿದೆ.

ಅದಕ್ಕಾಗಿ ಹಲವು ಅಭ್ಯರ್ಥಿಗಳಿಗೆ ಹಣಕ್ಕೆ ಬೇಡಿಕೆಯೊಡ್ಡಲಾಗಿದೆ. ಪ್ರತಿ ಅಭ್ಯರ್ಥಿಗಳಿಂದ ಸುಮಾರು 30 ಲಕ್ಷದಿಂದ 50 ಲಕ್ಷ ರೂ.ಗಳವರೆಗೆ ಲಂಚ ಪಡೆಯಲಾಗಿದೆ. ನೇಮಕಾತಿಗಳು ಭಾರೀ ಅಕ್ರಮ ನಡೆದಿದೆ ಎಂದು ಆರೋಪಗಳ ಬಗ್ಗೆ ಕೆಎಂಎಫ್ಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಜತೆಗೆ ಮುಖ್ಯಮಂತ್ರಿಗಳಿಗೂ ನೇಮಕ ತಡೆ ಹಿಡಿಯುವಂತೆ ಕೋರಲಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಈ ಅಕ್ರಮ ನೇಮಕದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅಲ್ಲದೆ, ತನಿಖೆ ಮುಗಿಯುವವರೆಗೆ ನೇಮಕ ತಡೆ ಹಿಡಿಯುವಂತೆ ಕೋರಿದ್ದ ಮನವಿಯನ್ನು ಪುರಸ್ಕರಿಸುವಂತೆಯೂ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು. ಜತೆಗೆ ಈ 487 ಹುದ್ದೆಗಳ ನೇಮಕದಿಂದ ಪ್ರತಿ ತಿಂಗಳು ವೇತನಕ್ಕೆ 3 ಕೋಟಿ ಮತ್ತು ವರ್ಷಕ್ಕೆ 30ರಿಂದ 40 ಕೋಟಿ ಹೆಚ್ಚುವರಿ ವೆಚ್ಚ ತಗಲಲಿದೆ. ಈ ಹೆಚ್ಚುವರಿ ಹುದ್ದೆಗಳ ಭರ್ತಿ ಅಗತ್ಯವಿಲ್ಲ. ಆದರೂ ನೇಮಕ ಮಾಡಲಾಗುತ್ತಿದೆ. ಇದರಿಂದ ಹಾಲು ಉತ್ಪಾದಕರ ಸಂಘಗಳ ಮೇಲೆ ಆರ್ಥಿಕ ಹೊರೆ ಬೀಳಲಿದೆ. ಈ ನೇಮಕದ ಮುಂದೆ ಸಹಕಾರ ಸಂಘಗಳ ಜತೆ ಕೆಎಂಎಫ್ ಚರ್ಚೆ ನಡೆಸಿಲ್ಲ ಎಂದೂ ಅರ್ಜಿಯಲ್ಲಿ ತಿಳಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next