Advertisement

5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ

10:39 AM Jan 02, 2023 | Team Udayavani |

ದೊಡ್ಡಬಳ್ಳಾಪುರ: ಚುನಾವಣ ಆಯೋಗದ ನಿರ್ದೇಶನದಂತೆ ಮತದಾರರ ಮನೆ ಮನೆ ಭೇಟಿ ಕಾರ್ಯ ನಡೆದಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮುಕ್ತಾಯವಾಗಿದ್ದು, ಜ.5ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಎನ್‌. ತೇಜಸ್‌ ಕುಮಾರ್‌ ಹೇಳಿದರು.

Advertisement

ನಗರದಲ್ಲಿ ಬಗ್ಗೆ ಮಾಹಿತಿ ನೀಡಿದ ಅವರು, ಚುನಾ ವಣ ಆಯೋಗದ ನಿರ್ದೇಶನದಂತೆ ನ.9ರಿಂದ ಡಿ.8 ರವರೆಗೆ ಮತದಾರರಿಂದ ಬಂದಿದ್ದ ಆಕ್ಷೇಪಣೆಗಳನ್ನು ಸ್ವೀಕರಿಸಿ, ಬೂತ್‌ಮಟ್ಟದ ಅಧಿಕಾರಿಗಳು ಪ್ರತಿ ಮನೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿ.9ರಿಂದ ಡಿ.26 ಅವಧಿ ಯಲ್ಲಿ ಮತದಾರರಿಂದ ಬಂದಿದ್ದ ಎಲ್ಲಾ ಆಕ್ಷೇಪಣೆ ಗಳನ್ನು ಸರಿಪಡಿಸಲಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ: ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಜಿಲ್ಲಾ ನೋಡಲ್‌ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಮತಗಟ್ಟೆ ವ್ಯಾಪ್ತಿಯಲ್ಲಿನ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಮತದಾರರಿಂದ ಅಭಿಪ್ರಾಯಗಳನ್ನು ಪಡೆದಿದ್ದಾರೆ. ಕುಟುಂಬದ ಸದಸ್ಯರು ಮರಣ ಹೊಂದಿರುವಂತಹ ಸಂದರ್ಭಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವಂತೆ ಜನರೇ ಸ್ವಯಂಪ್ರೇರಣಿಯಿಂದ ಸೂಕ್ತ ದಾಖಲಾತಿ ನೀಡಿ ಹೆಸರನ್ನು ತೆಗೆಸಿದ್ದಾರೆ. ಇದರಿಂದ ಮತದಾರರ ಪಟ್ಟಿಯಲ್ಲಿ ಮರಣ ಹೊಂದಿದವರ ಹೆಸರು ಹಾಗೆಯೇ ಉಳಿಯುವುದು ತಪ್ಪಿದೆ ಎಂದರು.

ಮತದಾರರ ಆಕ್ಷೇಪಣೆ ಪರಿಶೀಲನೆ: ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿನ 1,137 ಮತಗಟ್ಟೆಗಳ ಮತದಾರರಿಂದ ಈಗಾಗಲೇ ಬಂದಿರುವ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲಾಗಿದೆ. ಜ.5ರಂದು ನೋಂದಾಯಿತ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಮತದಾರರ ಪಟ್ಟಿಯನ್ನು ಉಚಿತವಾಗಿ ನೀಡಲಾಗುವುದು. ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೆಸರು ಸೇರ್ಪಡೆ ಮಾಡುವುದು ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳು ಇದ್ದರೆ ಚುನಾವಣ ದಿನಾಂಕ ಘೋಷಣೆಯಾದ ನಂತರ ನಾಮಪತ್ರ ಸಲ್ಲಿಕೆಯ ಅಂತಿಮ ದಿನದವರೆಗೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರಲಿದೆ ಎಂದು ಹೇಳಿದರು.

ಸಾರ್ವಜನಿಕರ ಮಾಹಿತಿಗಾಗಿ ಪ್ರಕಟ: ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೊದಲುಗೊಂಡು ಎಲ್ಲಾ ತಾಲೂಕು ಕಚೇರಿಗಳು ಹಾಗೂ ಪ್ರತಿ ಮತಗಟ್ಟೆಗಳಲ್ಲೂ ಮತದಾರರ ಅಂತಿಮ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು. ಅಲ್ಲದೆ, ಆನ್‌ಲೈನ್ನಲ್ಲೂ ಸಹ ಮತದಾರರು ತಮ್ಮ ಹೆಸರುಗಳು ಪಟ್ಟಿಯಲ್ಲಿ ಇರುವ ಬಗ್ಗೆ ಪರಿಶೀಲನೆ ನಡೆಸಿಕೊಳ್ಳ ಬಹುದಾಗಿದೆ ಎಂದರು. ಚುನಾವಣ ವಿಭಾಗದ ತಹಶೀಲ್ದಾರ್‌ ಬಸವರಾಜ್‌ ತೆನ್ನಹಳ್ಳಿ, ಚುನಾವಣ ಶಾಖೆಯ ರಘುನಂದನ್‌ ಹಾಗೂ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next