ಮೌಂಟ್ ಮೌಂಗನಿ: ಟಿ20 ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಐದು ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ. ಮೌಂಟ್ ಮೌಂಗನಿಯಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.
ಪ್ರಯೋಗಕ್ಕೆ ಮುಂದಾಗಿರುವ ಭಾರತ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ನೀಡಿದೆ. ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್ ವಾಪಾಸಾಗಿದ್ದು, ಈ ಪಂದ್ಯದಲ್ಲಿ ತಂಡದ ನಾಯಕತ್ವ ನಿಭಾಯಿಸಲಿದ್ದಾರೆ.
ಕಿವೀಸ್ ನಾಯಕ ವಿಲಿಯಮ್ಸನ್ ಇಂದಿನ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೀಗಾಗಿ ಟಿಮ್ ಸೌಥಿ ಕಿವೀಸ್ ನಾಯಕತ್ವ ವಹಿಸಿದ್ದಾರೆ.
ಸರಣಿಯಲ್ಲಿ ಈಗಾಗಲೇ ನಾಲ್ಕು ಪಂದ್ಯ ಸೋತಿರುವ ನ್ಯೂಜಿಲ್ಯಾಂಡ್ ಅವಮಾನ ತಪ್ಪಿಸಿಕೊಳ್ಳಲು ಇಂದಿನ ಪಂದ್ಯ ಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದಾರೆ. ಇಂದಿನ ಪಂದ್ಯ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಇತಿಹಾಸ ಬರೆಯಲು ಭಾರತ ಸಜ್ಜಾಗಿದೆ.
ಭಾರತ: ರೋಹಿತ್ ಶರ್ಮ (ನಾಯಕ), ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಾಹುಲ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಚಾಹಲ್, ನವದೀಪ್ ಸೈನಿ, ಮೊಹಮ್ಮದ್ ಶಮಿ.
ನ್ಯೂಜಿಲ್ಯಾಂಡ್: ಮಾರ್ಟಿನ್ ಗಪ್ಟಿಲ್, ಕಾಲಿನ್ ಮುನ್ರೊ, ಟಿಮ್ ಸೀಫರ್ಟ್, ರಾಸ್ ಟೇಲರ್, ಟಾಮ್ ಬ್ರೂಸ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಐಶ್ ಸೋಧಿ, ಟಿಮ್ ಸೌಥಿ (ನಾಯಕ), ಹಾಮಿಶ್ ಬೆನೆಟ್, ಸ್ಕಾಟ್ ಕ್ಯುಗೆಲೀನ್