Advertisement
ಈಗಾಗಲೇ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ವೇಳಾಪಟ್ಟಿ ಪ್ರಕಟಿಸಿದ್ದು, ಫೆ. 22ರಿಂದ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆಗಳು ಆರಂಭವಾಗುತ್ತಿವೆ.
ಆದರೆ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೊರೊನಾ ಕಾರಣದಿಂದ ತಡವಾಗಿ ಮೇ- ಜೂನ್ ತಿಂಗಳಿನಲ್ಲಿ ತರಗತಿಗಳು ಆರಂಭವಾಗಿವೆ. ಬಳಿಕವೂ ಆನ್‌ಲೈನ್‌ನಲ್ಲಿ ತರಗತಿಗಳು ನಡೆದಿದ್ದು, ಅಗತ್ಯವಿದ್ದಷ್ಟು ಕ್ಲಿನಿಕಲ್ ಪೋಸ್ಟಿಂಗ್ ಸಹ ಆಗಿರುವುದಿಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳು ಕೊರೊನಾ ಸಂದರ್ಭದಲ್ಲಿ ಕೆಲವು ತಿಂಗಳುಗಳ ಕಾಲ ಕೊರೊನಾ ಕರ್ತವ್ಯ ನಿರ್ವಹಿಸಿದ್ದಾರೆ. ಮತ್ತೆ ಕೊರೊನಾ ಮೂರನೇ ಅಲೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ ಪರೀಕ್ಷೆ ತಯಾರಿಗೆ ಸಮಯ ಕಡಿಮೆ ಇರುವುದರಿಂದ ಪರೀಕ್ಷೆ ವೇಳಾಪಟ್ಟಿಯನ್ನು ಮುಂದೂಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಅವರು ಆರೋಗ್ಯ ವಿವಿ ಕುಲಪತಿಗಳಿಗೆ ಸೋಮವಾರ ಪತ್ರ ಬರೆದಿದ್ದರು. ಇದನ್ನೂ ಓದಿ:ಸುಗಮ ಕಲಾಪಕ್ಕೆ ಸಂಸದರು ನೆರವು ನೀಡಲಿ: ರಾಜ್ಯಸಭೆ ಸಭಾಪತಿ
Related Articles
ಈ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ವಿವಿ ಮೂಲಗಳು, ಪ್ರಸಕ್ತ ಶೈಕ್ಷಣಿಕ ವರ್ಷದ ಪರೀಕ್ಷೆಯನ್ನು ತಡವಾಗಿ ನಡೆಸಿ ಫಲಿತಾಂಶ ನೀಡಲು ವಿಳಂಬ ಮಾಡಿದರೆ, ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಸಮಸ್ಯೆಯಾಗುತ್ತದೆ.
Advertisement
ವಂಚಿತರಾಗುವ ಸಾಧ್ಯತೆಎಪ್ರಿಲ್ನೊಳಗೆ ಫಲಿತಾಂಶ ನೀಡಿದರೆ, ಮುಂದಿನ ಡಿಸೆಂಬರ್- ಜನವರಿಯಲ್ಲಿ ನಡೆಯಲಿರುವ ಪಿಜಿ-ನೀಟ್ ಪ್ರವೇಶಕ್ಕೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪ್ರವೇಶದಿಂದ ವಂಚಿತರಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ನಿಗದಿತ ಸಮಯದಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದೆ.