Advertisement
ರವಿವಾರ ಕೋರ್ ಕಮಿಟಿ ಸಭೆಯ ಬಳಿಕ ಪ್ರಕಟಿಸಲಾದ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಇರಲಿಲ್ಲ. ಇದರಿಂದ ಕೋಪಗೊಂಡಿದ್ದ ವಿಜಯೇಂದ್ರ ಅಭಿಮಾನಿಗಳು, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದರು. ಬಿ.ಎಲ್.ಸಂತೋಷ್ ಸೇರಿ ಬಿಜೆಪಿ ನಾಯಕರ ವಿರುದ್ಧ ವಿಜಯೇಂದ್ರ ಬೆಂಬಲಿಗರು ತಮ್ಮ ಅಸಮಾಧಾನ ಹೊರಹಾಕಿದ್ದರು. ಬಳಿಕ ಪಕ್ಷದ ವಿರುದ್ದ ಮಾತನಾಡದಂತೆ ವಿಜಯೇಂದ್ರ ಅಭಿಮಾನಿಗಳ ಬಳಿ ಮನವಿಯನ್ನೂ ಮಾಡಿದ್ದರು.
Related Articles
Advertisement
ಸಿಂದಗಿ ಕ್ಷೇತ್ರಕ್ಕೆ ಗೊವಿಂದ ಕಾರಜೋಳ, ವಿ. ಸೋಮಣ್ಣ, ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ, ರಮೇಶ್ ಜಿಗಜಿಣಗಿ, ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ ನಡಹಳ್ಳಿ, ಪಿ. ರಾಜೀವ, ಶ್ರೀಕಾಂತ ಕುಲಕರ್ಣಿ, ಬಾಬುರಾವ್ ಚಿಂಚನಸೂರ್ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಯಡಿಯೂರಪ್ಪ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ ಸವದಿ ಅವರಿಗೆ ಸಿಂದಗಿ ಉಪ ಚುನಾವಣೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಈಗ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರಿಂದ ಅವರ ಬದಲು ಗೋವಿಂದ ಕಾರಜೋಳ ಅವರಿಗೆ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಹಾನಗಲ್ ಕ್ಷೇತ್ರದಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಜೆ.ಸಿ. ಮಾಧುಸ್ವಾಮಿ, ಬಿ.ಸಿ. ಪಾಟೀಲ್, ಶಿವರಾಮ್ ಹೆಬ್ಟಾರ, ಶಿವಕುಮಾರ ಉದಾಸಿ, ಎನ್. ರವಿಕುಮಾರ, ಮಹೇಶ ಟೆಂಗಿನಕಾಯಿ, ರಾಜುಗೌಡ, ನೆಹರೂ ಓಲೇಕಾರ, ಎಂ. ಚಂದ್ರಪ್ಪ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಗುತ್ತೂರು, ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.