Advertisement

ಕೊನೆಗೂ ಶಿವಮೊಗ್ಗ ನಗರ ಮತ್ತು ಮಾನ್ವಿ ಅಭ್ಯರ್ಥಿಗಳನ್ನು ಘೋಷಿಸಿದ BJP

11:14 PM Apr 19, 2023 | Team Udayavani |

ಬೆಂಗಳೂರು : ನಾಮಪತ್ರ ಸಲ್ಲಿಕೆಗೆ ಒಂದು ದಿನ ಮೊದಲು ಬಿಜೆಪಿ ಬಾಕಿ ಉಳಿಸಿಕೊಂಡಿದ್ದ ಶಿವಮೊಗ್ಗ ನಗರ ಮತ್ತು ರಾಯಚೂರಿನ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

Advertisement

ಬಿಜೆಪಿಯ ಪ್ರಬಲ ನಾಯಕ ಕೆ.ಎಸ್. ಈಶ್ವರಪ್ಪ ಅವರು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಿಸುವುದು ಬಿಜೆಪಿಗೆ ಕಗ್ಗಂಟಾಗಿತ್ತು. ಕೊನೆಗೂ ಶಿವಮೊಗ್ಗ ಪಾಲಿಕೆಯ ಆಡಳಿತ ಪಕ್ಷದ ನಾಯಕ ಎಸ್‌.ಎಸ್. ಚನ್ನಬಸಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಹಿಂದುತ್ವದ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿದ್ದು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡು ಚನ್ನಿ ಎಂದು ಪರಿಚಿತರಾಗಿದ್ದಾರೆ.

ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್‌, ಎಸ್‌.ಎಸ್.ಜ್ಯೋತಿ ಪ್ರಕಾಶ್‌, ಡಾ.ಧನಂಜಯ ಸರ್ಜಿ ಅವರು ಆಕಾಂಕ್ಷಿಗಳಾಗಿದ್ದರು. ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಪಾಲಿಕೆಯ ಮಾಜಿ ಉಪಮೇಯರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಮಾನ್ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಸಂಸದ ಬಿ.ವಿ.ನಾಯಕ ಅವರಿಗೆ  ಟಿಕೆಟ್ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next