Advertisement

ಅಮಿತ್ ಶಾ ಚಾಟಿ; ಕೊನೆಗೂ ಧರಣಿ ನಿರತ ರೈತರನ್ನು ಭೇಟಿಯಾದ BSY

04:56 PM Dec 26, 2017 | Sharanya Alva |

ಬೆಂಗಳೂರು: ಮಹದಾಯಿ, ಕಳಸಾ ಬಂಡೂರಿ ಯೋಜನೆ ವಿಚಾರ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಸಮರವನ್ನೇ ಸೃಷ್ಟಿಸಿದೆ. ಕಳೆದ ನಾಲ್ಕು ದಿನಗಳಿಂದ ಮಹದಾಯಿ ಹೋರಾಟಗಾರರು ಬಿಜೆಪಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಏತನ್ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಖಡಕ್ ಸೂಚನೆ ಬೆನ್ನಲ್ಲೇ ಮಂಗಳವಾರ ಸಂಜೆ ಬಿಎಸ್ ಯಡಿಯೂರಪ್ಪ ಕೊನೆಗೂ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿದ್ದಾರೆ.

Advertisement

ಮಹದಾಯಿ ವಿಚಾರದಲ್ಲಿ ಯಡಿಯೂರಪ್ಪನವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿ ರೈತರು ಬಿಜೆಪಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಅಲ್ಲದೇ ಮಂಗಳವಾರ ಬೆಳಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲು ನಿರ್ಧರಿಸಿದ್ದರು, ಬಳಿಕ ಮಹದಾಯಿ ಹೋರಾಟಗಾರರ  ಪ್ರತಿಭಟನೆ ಬಿಸಿಯಿಂದ ತಪ್ಪಿಸಿಕೊಳ್ಳಲು ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಕೋರ್ ಕಮಿಟಿ ಸಭೆ ನಡೆಸಿದರು.

ಇವೆಲ್ಲ ಜಟಾಪಟಿ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿ ಚರ್ಚಿಸಿದರು. ಸಂಜೆ ನೀರಾವರಿ ಸಚಿವ ಎಂಬಿ ಪಾಟೀಲ್ ಭೇಟಿ ನೀಡಿ ರೈತರ ಅಹವಾಲನ್ನು ಆಲಿಸಿದರು.
 

ಅಮಿತ್ ಶಾ ಚಾಟಿ:

ಮಹದಾಯಿ ವಿಚಾರದಲ್ಲಿ ಏನ್ ಮಾಡ್ತಾ ಇದ್ದೀರಿ, ಕೂಡಲೇ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡು, ತಕ್ಷಣವೇ ಮಹದಾಯಿ ಹೋರಾಟಗಾರರನ್ನು ಭೇಟಿಯಾಗುವಂತೆ ಅಮಿತ್ ಶಾ ಖಡಕ್ ಸೂಚನೆ ರವಾನಿಸಿದ್ದರು ಎಂದು ಮಾಧ್ಯಮದ ವರದಿಗಳು ತಿಳಿಸಿದ್ದವು.

Advertisement

ಯಡಿಯೂರಪ್ಪ ಹೀಂಗ್ ಬಂದ್ರು…ಎಂಬಿ ಪಾಟೀಲ್ ಹಂಗ್ ಹೋದ್ರು!

ಬಿಎಸ್ ಯಡಿಯೂರಪ್ಪ ಬಿಜೆಪಿ ಕಚೇರಿ ಬಳಿ ಆಗಮಿಸಿದ್ದ ವೇಳೆ ಕಾಂಗ್ರೆಸ್ ಮುಖಂಡ, ಸಚಿವ ಎಂಬಿ ಪಾಟೀಲ್ ಮಹದಾಯಿ ಹೋರಾಟಗಾರರ ಜತೆ ಚರ್ಚೆ ನಡೆಸಿ, ಅಹವಾಲು ಸ್ವೀಕರಿಸಿದ್ದರು. ಇದನ್ನು ಕಂಡ ಬಿಎಸ್ ವೈ ದೂರದಲ್ಲೇ ನಿಂತಿದ್ದರು, ಬಳಿಕ ಪೊಲೀಸರು ಸರ್ ನೀವು ಹೀಗೆ ಬನ್ನಿ ಎಂದು ಕರೆದುಕೊಂಡು ಹೋದರು. ಎಂಬಿ ಪಾಟೀಲ್ ಅವರು ಹೊರಹೋದ ಬಳಿಕ ಬಿಎಸ್ ಯಡಿಯೂರಪ್ಪ ಮಹದಾಯಿ ಹೋರಾಟಗಾರರ ಬಳಿ ಬಂದು ಚರ್ಚಿಸಲು ಆರಂಭಿಸಿದ್ದರು!

Advertisement

Udayavani is now on Telegram. Click here to join our channel and stay updated with the latest news.

Next