Advertisement

ಕೊನೆಗೂ ಯತ್ನಾಳ್‌ಗೆ ನೋಟಿಸ್‌; ವಿಜಯ ಸಂಕಲ್ಪ ಯಾತ್ರೆಯಿಂದ ದೂರ

09:50 PM Jan 21, 2023 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಪಕ್ಷದ ಕೆಲ ಹಿರಿಯ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದ್ದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಕೊನೆಗೂ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್‌ ಜಾರಿ ಮಾಡಿ ದಿಲ್ಲಿಗೆ ವಿಚಾರಣೆಗೆ ಬರುವಂತೆ ಸೂಚಿಸಿದೆ.

Advertisement

ಇದನ್ನೂ ಓದಿ: ಜೆ.ಪಿ.ನಡ್ಡಾ ವಿಜಯಪುರ ಕಾರ್ಯಕ್ರಮಕ್ಕೆ ಯತ್ನಾಳ್ ಗೈರು; ಚರ್ಚೆಗೆ ಗ್ರಾಸ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ನೋಟಿಸ್‌ ಜಾರಿ ಮಾಡಿರುವುದನ್ನು ಖಚಿತಪಡಿಸಿದ್ದು, ಯತ್ನಾಳ್‌ ಅವರಿಗೆ ಶಿಸ್ತು ಸಮಿತಿಯ ಮುಂದೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

ವಿಚಾರಣೆ ನಡೆಸಿ ಶಿಸ್ತು ಸಮಿತಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕಾರಣಕ್ಕಾಗಿಯೇ ವಿಜಯಪುರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಿಂದ ಯತ್ನಾಳ್‌ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next