Advertisement

ತೆರಿಗೆ ಕಡಿತ ಮಾಡಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ-ವಿತ್ತ ಸಚಿವಾಲಯ ಚಿಂತನೆ?

01:48 PM Mar 02, 2021 | Team Udayavani |

ನವದೆಹಲಿ: ದೇಶದಲ್ಲಿ ಸತತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದ್ದು, ಇದು ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗತೊಡಗಿದೆ. ಏತನ್ಮಧ್ಯೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಬಗ್ಗೆ ವಿತ್ತ ಸಚಿವಾಲಯ ಚಿಂತನೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಕರಾವಳಿಗರನ್ನು ಸೆಳೆಯುತ್ತಿರುವ ಇ-ವಾಹನ : ಒಂದೇ ವರ್ಷ 450 ವಾಹನಗಳು ರಸ್ತೆಗೆ

ಕಳೆದ ಹತ್ತು ತಿಂಗಳಿನಿಂದ ಕಚ್ಛಾ ತೈಲ ಬೆಲೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿಯೂ ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ವಿಶ್ವದ ಮೂರನೇ ಅತೀ ದೊಡ್ಡ ಕಚ್ಛಾ ತೈಲ ಗ್ರಾಹಕ ದೇಶವಾಗಿರುವ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಅಂದಾಜು ಶೇ.60ರಷ್ಟು ತೆರಿಗೆ ಮತ್ತು ಅಬಕಾರಿ ಸುಂಕ ವಿಧಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸುವ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಮೂಲಕ ಬೆಲೆ ಇಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಕೋವಿಡ್ ಸೋಂಕಿನಿಂದ ದೇಶದ ಆರ್ಥಿಕ ಚಟುವಟಿಕೆ ಮೇಲೆ ಹೊಡೆತ ಬಿದ್ದ ಪರಿಣಾಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ಆರ್ಥಿಕ ಚೇತರಿಕೆಗಾಗಿ ಪೆಟ್ರೋಲ್, ಡೀಸೆಲ್ ಮೇಲೆ ಎರಡು ಬಾರಿ ತೆರಿಗೆಯನ್ನು ಹೆಚ್ಚಳ ಮಾಡಿತ್ತು.

Advertisement

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಶೇ.1.7ರಷ್ಟು ಏರಿಕೆ ಕಂಡಿದ್ದು, ಪ್ರತಿ ಬ್ಯಾರೆಲ್ ತೈಲ ಬೆಲೆ 65.49 ಯುಎಸ್ ಡಾಲರ್ ನಷ್ಟಾಗಿದೆ.ಇದಕ್ಕೆ ತೆರಿಗೆ, ಅಬಕಾರಿ ಸುಂಕ ವಿಧಿಸುವ ಮೂಲಕ ಈಗಾಗಲೇ ಭಾರತದಲ್ಲಿ ಪೆಟ್ರೋಲ್ ಬೆಲೆ ನೂರು ರೂಪಾಯಿ ಗಡಿ ಸಮೀಪಿಸುತ್ತಿದೆ. ಡೀಸೆಲ್ ಬೆಲೆ ಕೂಡಾ 90 ರೂಪಾಯಿ ಗಡಿಯಲ್ಲಿದೆ. ಏತನ್ಮಧ್ಯೆ ಒಪೆಕ್ ರಾಷ್ಟ್ರಗಳು(ತೈಲೋತ್ಪನ್ನ ದೇಶ) ಕಡಿಮೆ ಪ್ರಮಾಣದಲ್ಲಿ ತೈಲ ಪೂರೈಕೆ ಮಾಡುತ್ತಿರುವುದು ಹಾಗೂ ಕಡಿಮೆ ಪ್ರಮಾಣದಲ್ಲಿ ತೈಲ ಉತ್ಪನ್ನ ಮಾಡುವ ಮೂಲಕ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡಿದೆ.

ಮತ್ತೊಂದೆಡೆ ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಕಾರಣ, ವಿತ್ತ ಸಚಿವಾಲಯ ಇದೀಗ ಗ್ರಾಹಕರ ಮೇಲೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ಕಡಿಮೆ ತೆರಿಗೆ ವಿಧಿಸುವ ಹಾಗೂ ಬೆಲೆ ಇಳಿಕೆ ಸುಲಭ ದಾರಿ ಕಂಡುಹಿಡಿಯುವಂತೆ ಕೆಲವು ರಾಜ್ಯಗಳಿಗೆ, ತೈಲ ಕಂಪನಿಗಳಿಗೆ ಮತ್ತು ಇಂಧನ ಸಚಿವಾಲಯದ ಅಧಿಕಾರಿಗಳನ್ನು ಸಂಪರ್ಕಿಸಿ ಸಮಾಲೋಚನೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next