Advertisement

ಕರಾಟೆ ಪಟುಗಳಿಗೆ ಉಡುಪಿಯ ವೆಂಟನ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

07:05 PM Aug 06, 2022 | Team Udayavani |

ಉಡುಪಿ: ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ಕರಾಟೆ ಪಟುಗಳಾದ ಚೇತನ ಗಾಣಿಗ, ಪವನ ಪೂಜಾರಿ, ಭರತ ದೇವಾಡಿಗ ಮತ್ತು ಅಜಯ್ ದೇವಾಡಿಗ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳಿಗೆ ಉಡುಪಿಯ ವೆಂಟನ ಫೌಂಡೇಶನ್ ವತಿಯಿಂದ ಆಗಸ್ಟ್ 19ರಿಂದ 23ರವರೆಗೆ ಥಾಯ್ ಲ್ಯಾಂಡ್ ನಲ್ಲಿ ನಡೆಯಲಿರುವ ಕರಾಟೆ ಡೂ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಸಹಾಯಧನ ನೀಡಿದೆ.

Advertisement

ವೆಂಟನ ಫೌಂಡೇಶನ್ ವತಿಯಿಂದ ಸದಸ್ಯ ಷಣ್ಮುಖರಾಜ ಅವರು ನಾಲ್ಕು ಕ್ರೀಡಾಪಟುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಚೆಕ್ ಅನ್ನು ಹಸ್ತಾಂತರಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಕೆ.ಪಿ.ಭಟ್, ಕಾಲೇಜಿನ ವಿಶ್ವಸ್ಥ ಮಂಡಳಿ ಸದಸ್ಯ ಪ್ರಕಾಶ್ ಸೋನ್ಸ್ ಕರಾಟೆ ಪಟುಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ನಾರಾಯಣ ಶೆಟ್ಟಿ, ವಿಶ್ವಸ್ಥ ಮಂಡಳಿಯ ಸದಸ್ಯರಾದ ದೇವದಾಸ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಕ ಶಂಕರ ನಾರಾಯಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next