Advertisement

ಮನೆ ನಿರ್ಮಿಸಲು ಹಣಕಾಸು ನೆರವು

11:55 AM Dec 02, 2018 | |

ಮಂಗಳೂರು: ದೇಶದ ಪ್ರತಿಷ್ಠಿತ ಚಿನ್ನಾಭರಣ ಮಾರಾಟ ಮಳಿಗೆ, ಮಲಬಾರ್‌ ಗೋಲ್ಡ್‌ ಆಂಡ್‌ ಡೈಮಂಡ್ಸ್‌ ತನ್ನ ಸಾಂಸ್ಥಿಕ ಮತ್ತು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ವಸತಿ ರಹಿತರಿಗೆ ಮನೆ ನಿರ್ಮಾಣಕ್ಕಾಗಿ ಹಣಕಾಸು ನೆರವನ್ನು ನೀಡಿದೆ. ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ನ ಮಂಗಳೂರು ಮಳಿಗೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ 45 ಫ‌ಲಾನುಭವಿಗಳಿಗೆ ಹಣಕಾಸು ನೆರವನ್ನು ನೀಡಲಾಯಿತು.

Advertisement

ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್‌, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌, ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ಭಾಸ್ಕರ್‌ ಕೆ., ಮಂಗಳೂರು ಪಾಲಿಕೆಯ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಪ್ರವೀಣ್‌ ಚಂದ್ರ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್‌ ಸದಸ್ಯ ಶಾಹುಲ್‌ ಹಮೀದ್‌,

ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ನ ನಿರ್ದೇಶಕರಾದ ಕರುಣಾಕರನ್‌, ಮಳಿಗೆಯ ಸ್ಟೋರ್‌ ಮುಖ್ಯಸ್ಥರಾದ ಶರತ್‌ ಚಂದ್ರನ್‌, ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ನ ಉಡುಪಿ ಮಳಿಗೆಯ ಸ್ಟೋರ್‌ ಮುಖ್ಯಸ್ಥರಾದ ಹಫೀಜ್‌ ರೆಹಮಾನ್‌ ಉಪಸ್ಥಿತರಿದ್ದರು. ಕಳೆದ ಎರಡು ದಶಕಗಳಿಂದೀಚೆಗೆ ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಸಮಾಜದ ಅಶಕ್ತರಿಗೆ ನೆರವು ನೀಡುತ್ತಾ ಬಂದಿದೆ.

ಅನಾರೋಗ್ಯ ಪೀಡಿತ ಬಡವರಿಗೆ ಉಚಿತ ಔಷಧ, ಆಶ್ರಯ ರಹಿತರಿಗೆ ಮನೆ ನಿರ್ಮಾಣಕ್ಕೆ ಹಣಕಾಸು ನೆರವು, ಮಹಿಳಾ ಸಶಕ್ತೀಕರಣ ಕಾರ್ಯಕ್ರಮಗಳು, ವಿದ್ಯಾರ್ಥಿನಿಯರಿಗೆ ಸ್ಕಾಲರ್‌ಶಿಪ್‌, ಪರಿಸರ ಸಂರಕ್ಷಣೆಯಂಥ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ.

ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ತನ್ನ ವಾರ್ಷಿಕ ಲಾಭಾಂಶದಲ್ಲಿ ಶೇ. 5ರಷ್ಟು ಮೊತ್ತವನ್ನು ಸಮಾಜಸೇವಾ ಚಟುವಟಿಕೆಗಳಿಗಾಗಿ ವ್ಯಯಿಸುತ್ತಿದ್ದು ಕಂಪೆನಿಯ ಹೌಸಿಂಗ್‌ ಚಾರಿಟೇಬಲ್‌ ಟ್ರಸ್ಟ್‌ ಈಗಾಗಲೇ 11,000 ಮನೆಗಳ ನಿರ್ಮಾಣಕ್ಕೆ ಹಣಕಾಸು ನೆರವನ್ನು ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next