Advertisement
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕಾಡುಪ್ರಾಣಿಗಳಿಗೆ ಅಗತ್ಯವಿರುವ ಹಣ್ಣು-ಹಂಪಲು, ಗಿಡ-ಮರಗಳನ್ನು ಬೆಳೆಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಡಿತರ ವ್ಯವಸ್ಥೆಯಲ್ಲಿ ಪಡೆದ ದವಸ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡದಂತೆ ಎಚ್ಚರ ವಹಿಸಬೇಕು. ಸಿಕ್ಕಿಬಿದ್ದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಿದರು. ಗಿಡಮರ ಬೆಳೆಯಲು ಒತ್ತು
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಮಾತನಾಡಿ, ಕಾಡು ಪ್ರಾಣಿಗಳು ಆಹಾರಗಳನ್ನು ಅರಸಿ ಜನವಸತಿಯತ್ತ ಬರುತ್ತಿವೆ. ಅದನ್ನು ತಡೆಯಲು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ-ಮರಗಳು, ಆನೆಗಳಿಗೆ ಅಗತ್ಯವಿದ್ದ ಬಿದಿರು, ಬೈನೆ ಮರಗಳನ್ನು ಬೆಳೆಯಲು ಒತ್ತು ನೀಡುವುದು ಅವಶ್ಯ ಎಂದು ಸಲಹೆ ನೀಡಿದರು.
Related Articles
ಪಡಿತರದಲ್ಲಿ ನೀಡುತ್ತಿರುವ ಅಕ್ಕಿಯನ್ನು ಹೆಚ್ಚಾಗಿ ಕರಾವಳಿಯ ಜನರು ಬಳಸುವುದಿಲ್ಲ. ಅವರಿಗೆ ಕುಚ್ಚಿಗೆ ಅಕ್ಕಿಯನ್ನು ಪಡಿತರದಲ್ಲಿ ವಿತರಿಸಬೇಕು ಎಂದು ಶಾಸಕ ರಘುಪತಿ ಭಟ್ ಸಚಿವರ ಗಮನಕ್ಕೆ ತಂದರು.
Advertisement
ಅಪರ ಜಿಲ್ಲಾಧಿಕಾರಿ ವೀಣಾ, ಮಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್, ಅರಣ್ಯ ಇಲಾಖೆ ಅಧಿಕಾರಿಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.