Advertisement

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ರೆ ಇಂದಿನಿಂದ ದುಬಾರಿ ದಂಡ: ಜಿಲ್ಲಾಧಿಕಾರಿ

10:46 AM Oct 05, 2020 | sudhir |

ಮಂಗಳೂರು: ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸರಕಾರದ ಆದೇಶವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಡಳಿತಗಳು ಮುಂದಾಗಿದ್ದು, ಸೋಮವಾರದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಸಿಕ್ಕಿಬಿದ್ದರೆ ದುಬಾರಿ ದಂಡ ಪಾವತಿ ಮಾಡಬೇಕಾಗುತ್ತದೆ!

Advertisement

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಈಗಾಗಲೇ ಈ ಬಗ್ಗೆ ಅಧಿಕೃತ ಆದೇಶ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ರಾಜ್ಯ ಸರಕಾರದ ಸೂಚನೆಯಂತೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 1,000 ರೂ.ಹಾಗೂ ಇತರ ಪ್ರದೇಶಗಳಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ. ಮನಪಾ ವ್ಯಾಪ್ತಿಯಲ್ಲಿ ಸೋಮವಾರದಿಂದಲೇ ದಂಡ ವಿಧಿಸ ಲಾಗುತ್ತದೆ ಎಂದು ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಇದನ್ನೂ ಓದಿ :ಹಾಸನ-ಮಂಗಳೂರು ರೈಲು ಮಾರ್ಗ: ಅತ್ಯಾಧುನಿಕ ಸಿಗ್ನಲ್‌ ಕಾರ್ಯಾರಂಭ

ಉಡುಪಿಯಲ್ಲೂ ಜಾರಿ
ಉಡುಪಿ ಜಿಲ್ಲೆಯಲ್ಲಿಯೂ ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ವಿರುದ್ಧ ಪರಿಷ್ಕೃತ ದಂಡ ಜಾರಿಯಾಗಿದ್ದು, ರವಿವಾರ ನಿಯಮ ಉಲ್ಲಂ ಸಿದವರಿಗೆ 500 ರೂ. ದಂಡ ಹಾಕಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

Advertisement

ಸೋಂಕಿನ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಈ ಹಿಂದೆ ವಿಧಿಸಿದ 100 ರೂ. ದಂಡವನ್ನು 500 ರೂ. ಏರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next