Advertisement

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉಗಿದರೆ ದಂಡ

01:20 PM Jan 30, 2021 | Team Udayavani |

ದೇವನಹಳ್ಳಿ: ಬೀಡಿ, ಸಿಗರೇಟು, ಗುಟ್ಕಾ, ಪಾನ್ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಜಗಿದು, ಉಗಿಯುವಂತಿಲ್ಲ. ಆದರೂ ನಿಯಮ ಉಲ್ಲಂ ಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗೆ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಸೂಚಿಸಿದರು.

Advertisement

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ತಂಬಾಕುನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಮೇಲೆ ದಿಢೀರ್‌ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಪಾನ್ಮಸಾಲಾ ಜಗಿಯುವವರ ವಿರುದ್ಧ ಆರೋಗ್ಯ ಇಲಾಖೆಯವರು ಮತ್ತು ಪೊಲೀಸ್‌ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದಂಡ ವಿಧಿಸುವುದರಂದಿಗೆ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ಜನರನ್ನು ತಂಬಾಕು ಸೇವನೆಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಗಜ ಅಂತರದಲ್ಲಿ ಧೂಮಪಾನ ಮಾಡುವುದು, ತಂಬಾಕು ಉತ್ಪನ್ನಗಳನ್ನು ಅಂಗಡಿ ಮಳಿಗೆಗಳಲ್ಲಿ ಮಾರಾಟ ಮಾಡುವಂತಿಲ್ಲ. ಈ ಕುರಿತು ಶಾಲೆಗಳಲ್ಲಿ ಗೋಡೆ ಬರಹ ಬರೆಯುವಂತೆ ತಿಳಿಸಿದರು.

ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕಿನ ವಿವಿಧ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಸಾಧಿಸಿ ಪೊಲೀಸ್‌ ಇಲಾಖೆಯ ಸಹಕಾರದೊಂದಿಗೆ ಸಾರ್ವಜನಿಕವಾಗಿ ತಂಬಾಕು ಸೇವನೆ ಮಾಡುವವರ ವಿರುದ್ಧ ಹಾಗೂ ಮಾರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ.ವಿದ್ಯಾ ಮಾತನಾಡಿ, ತಂಬಾಕು ದುಷ್ಪರಿಣಾಮ ಕುರಿತು 100 ಶಾಲೆಗಳಿಗೆ ಭೇಟಿ ನೀಡಿ ಅರಿವು ಮೂಡಿಸುವ ಗುರಿಯನ್ನು ಹೊಂದಲಾಗಿದ್ದು, ಈವರೆಗೂ ಕೋವಿಡ್‌ ಕಾರಣದಿಂದ 13 ಶಾಲೆಗಳಿಗೆ ಮಾತ್ರ ಭೇಟಿ ನೀಡಿ ಅರಿವು ಮೂಡಿಸಲಾಗಿದೆ.

ಇದನ್ನೂ ಓದಿ:ಫೆ. 2 ಕ್ಕೆ ಭಾರತೀಯ ಮಾರುಕಟ್ಟೆಗೆ “ಸ್ಯಾಮ್ ಸಂಗ್ ಗ್ಯಾಲಕ್ಸಿ M02” ಲಗ್ಗೆ

Advertisement

ಜಿಲ್ಲಾ ಹಂತದಲ್ಲಿ ಅನಿರೀಕ್ಷಿತ ದಾಳಿ ನಡೆಸಿ 51 ಪ್ರಕರಣಗಳನ್ನು ದಾಖಲಿಸಲಾಗಿದ್ದು, 8,750 ರೂ. ಗಳ ದಂಡ ಸಂಗ್ರಹಿಸಲಾಗಿದ್ದು, ಸ್ವತಃ ತಂಬಾಕು ತ್ಯಜಿಸಲು ಮುಂದಾಗುವವರಿಗೆ ದೊಡ್ಡಬಳ್ಳಾಪುರ ಆರೋಗ್ಯ ಕೇಂದ್ರದಲ್ಲಿ ಕೌನ್ಸೆಲಿಂಗ್‌ ಮಾಡಗುತ್ತಿದೆ ಎಂದು ಮಾಹಿತಿ ನೀಡಿದರು.

ಅಸಿಸ್ಟಂಟ್‌ ಸಬ್‌ ಇನ್ಸ್‌ಪೆಕ್ಟರ್‌ ತ್ಯಾಗರಾಜು ಮಾತನಾಡಿ, ಪೊಲೀಸ್‌ ಇಲಾಖೆಯಿಂದ ತಂಬಾಕು ಸೇವನೆ ನಿಯಂತ್ರಣದಡಿ 2,502 ಪ್ರಕರಣಗಳನ್ನು ದಾಖಲಿಸಲಾಗಿದ್ದು, 2,58,000 ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಡಾ.ಧರ್ಮೇಂದ್ರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಾಂತಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next