Advertisement

ಮಾಸಾಂತ್ಯದೊಳಗೆ ತರಗತಿ ಮುಗಿಸಿ

01:47 AM May 10, 2020 | Sriram |

ಬೆಂಗಳೂರು: ಮೇ ಅಂತ್ಯದೊಳಗೆ ಪದವಿ ತರಗತಿಗಳ ಪಠ್ಯಕ್ರಮ ಮುಗಿಸುವಂತೆ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ಆನ್‌ಲೈನ್‌ ಮೂಲಕವೇ ಪಾಠ ಮಾಡಿ, ಪಠ್ಯಕ್ರಮ ಮುಗಿಸಿ, ಪರೀಕ್ಷೆಗೆ ಸಜ್ಜುಗೊಳಿಸುವಂತೆಯೂ ಹೇಳಿದ್ದಾರೆ.

Advertisement

ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ವಿ.ವಿ. ಉಪಕುಲಪತಿಗಳೊಂದಿಗೆ ಶನಿವಾರ ವೀಡಿಯೋ ಕಾನ್ಫರೆನ್ಸ್‌ ನಡೆಸಿದ ಅವರು, ಪದವಿ ಪರೀಕ್ಷೆಗಳ ಕುರಿತು ಮೇ 17ರ ಅನಂತರ ಮತ್ತೂಮ್ಮೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಎಲ್ಲ ಪ್ರಾಧ್ಯಾಪಕರು ಕಾಲೇಜಿಗೆ ಬಂದು ಆನ್‌ಲೈನ್‌ ಮೂಲಕ ಪಾಠ, ಬೋಧನೆ ಮಾಡಬೇಕು. ಮೇ 30ರೊಳಗೆ ಎಲ್ಲ ಪದವಿ ಪಠ್ಯಕ್ರಮ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಮಹಾರಾಷ್ಟ್ರ ಮಾದರಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಿ, ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆ ಮಾಡಬಹುದು ಎಂಬ ಸಲಹೆ ಕೇಳಿಬಂದಿದೆ. ಈ ಬಗ್ಗೆ ಮೇ 17ರ ಬಳಿಕ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಈ ಮಧ್ಯೆ ರಾಜ್ಯದ ಎಲ್ಲ ವಿ.ವಿ.ಗಳಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಏಕರೂಪದ ಪಠ್ಯಕ್ರಮದ ಬಗ್ಗೆ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಡಾ| ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

Advertisement

ಮೌಲ್ಯಮಾಪನ ವ್ಯವಸ್ಥೆ ಸುಧಾರಣೆ
ಪದವಿ ಶಿಕ್ಷಣದಲ್ಲಿ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಸಂಬಂಧ ಸೋಮವಾರದೊಳಗೆ ಸಮಿತಿ ರಚಿಸಿ, ಆ ಸಮಿತಿ ಮುಂದಿನ 15 ದಿನದೊಳಗೆ ತನ್ನ ವರದಿ ಸಲ್ಲಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next