ದೇವನಹಳ್ಳಿ: ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳಿಗೆ ನಿಗದಿಪಡಿ ಸಲಾದ ಯೋಜನೆಗಳನ್ನು ಫೆಬ್ರವರಿ ಅಂತ್ಯಕ್ಕೆ ಪೂರ್ಣ ಗೊಳಿಸಿ ಭೌತಿಕ ಹಾಗೂ ಆರ್ಥಿಕ ಗುರಿ ತಲುಪ ಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಚಪ್ಪರದ ಕಲ್ಲು ಸರ್ಕಲ್ ಬಳಿಯ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಎಸ್‌ಸಿಪಿ, ಟಿಎಸ್‌ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಇಲಾಖೆಗಳಿಗೆ ನಿಗದಿಪಡಿಸಲಾದ ಎಸ್‌ಸಿಪಿ, ಟಿಎಸ್‌ಪಿ ಯೋಜನಾ ಕಾರ್ಯಕ್ರಮಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ ಸೂಕ್ತ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ದೊರಕಿಸಿಕೊಡಬೇಕೆಂದು ತಿಳಿಸಿದರು.
ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಕೆಯಲ್ಲಿ ಹಿಂದುಳಿದಿರುವ ಇಲಾಖೆಗಳು ಪೂರ್ಣ ಪ್ರಗತಿ ಸಾಧಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ಎಂ.ಸಿ.ನರಸಿಂಹಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರೇಮನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.