Advertisement

ಆದ್ಯತೆ ಮೇರೆಗೆ ಕಾಮಗಾರಿ ಮುಗಿಸಿ

11:07 AM Jul 29, 2020 | Suhan S |

ಚಿಕ್ಕಬಳ್ಳಾಪುರ: ಪ್ರವಾಸಿ ತಾಣವಾಗಿ ನಿರ್ಮಾಣವಾಗುತ್ತಿರುವ ನಗರದ ಕಂದವಾರ ಕೆರೆಯ ಕಾಮಗಾರಿಯನ್ನು ಮುಂದಿನ ಅಕ್ಟೋಬರ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಆರ್‌. ಲತಾ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಚಿಕ್ಕಬಳ್ಳಾಪುರ ನಗರ ಸಮಗ್ರ ಮೂಲ ಸೌಕರ್ಯಗಳ ಅಭಿವೃದ್ಧಿಯ ವಿಶೇಷ ಅನುದಾನದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂದವಾರ ಕೆರೆಯ ಬಳಿ ನಿರ್ಮಾಣವಾಗುತ್ತಿರುವ ಉದ್ಯಾನವನವನ್ನು ಮುಂದಿನ ನವೆಂಬರ್‌ನಲ್ಲಿ ಉದ್ಘಾಟನೆ ಮಾಡಲು ಚಿಂತಿಸಲಾಗಿದೆ. ಕೆರೆಯ ಒಳಭಾಗದಲ್ಲಿ ತೇಲುವ ಫೌಂಟೇನ್‌ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳ ನೀಲನಕ್ಷೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಗದಿತ ವೇಳೆಗೆ ಪೂರ್ಣಗೊಳಿಸಬೇಕು. ನಗರೋತ್ಥಾನ-3 ಯೋಜ ನೆಗಳು ಮತ್ತು ನಗರೋತ್ಥಾನ ವಿಶೇಷ ಅನುದಾನ 2016-17 ರ ಯೋಜನೆಗಳ ಬಗ್ಗೆ ಚರ್ಚಿಸಿ, ಯೋಜನೆಗಳಡಿಯಲ್ಲಿನ ನಾಮಫ‌ಲಕ, ಒಳಭಾಗದ ರಸ್ತೆ, ಸ್ಮಶಾನಗಳಲ್ಲಿ ಸ್ನಾನಗೃಹಗಳು ಮತ್ತು ಶೌಚಾಲಯಗಳ ನಿರ್ಮಾಣ ಸೇರಿದಂತೆ ನಗರದಲ್ಲಿನ ಉದ್ಯಾನವನಗಳ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದರು.

ನಗರದ ಬಿಬಿ ರಸ್ತೆ ಮತ್ತು ಎಂ.ಜಿ ರಸ್ತೆಯಲ್ಲಿ  ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರಾದ ಡಾ.ಭಾಸ್ಕರ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ನಗರಸಭೆ ಆಯುಕ್ತ ಲೋಹಿತ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next