ಮಡಿಕೇರಿ: ಕೊಡಗು ಜಿಲ್ಲಾ ಪ್ರವಾಸದ ವೇಳೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ, 9 ಬಿಜೆಪಿ ಹಿಂದೂಪರ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಾಗಿದೆ.
ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ, ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್, ಮತ್ತಿತರರ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಹಿನ್ನಲೆ 9 ಬಿಜೆಪಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಮಡಿಕೇರಿ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, 9 ಮಂದಿ ಬಿಜೆಪಿ, ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಇದನ್ನೂ ಓದಿ: ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ಠಾಣೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.