ಹೊಸದಿಲ್ಲಿ: ರವಿವಾರ ರಾತ್ರಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಹಲ್ಲೆಗೊಳಗಾದ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್ ಘೋಷ್ ಸೇರಿದಂತೆ 19 ಜನರ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಕಳೆದ ಶನಿವಾರ ಕಾಲೇಜಿನ ಸರ್ವರ್ ಕೊಠಡಿಗೆ ನುಗ್ಗಿ ದಾಂಧಲೆ ನಡೆಸಿದ್ದರು. ಇದೇ ಕಾರಣಕ್ಕಾಗಿ ಅವರ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ರವಿವಾರ ರಾತ್ರಿ ಜೆಎನ್ ಯು ಕ್ಯಾಂಪಸ್ ಒಳಗೆ ನುಗ್ಗಿದ್ದ ಹಲವು ಮುಸುಕುಧಾರಿಗಳು ಮಾರಾಕಾಸ್ತ್ರಗಳಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಹಲ್ಲೆ ಮಾಡಿದ್ದರು. ಈ ವೇಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್ ಘೋಷ್ ಗೂ ಗಾಯಗಳಾಗಿತ್ತು.
ಆದರೆ ಇಲ್ಲಿಯವರೆಗೆ ಯಾರ ಬಂಧನವೂ ನಡೆದಿಲ್ಲ.
ಜೆಎನ್ ಯು ಕ್ಯಾಂಪಸ್ ಗೆ ಮುಸುಕುಧಾರಿ ದುಷ್ಕರ್ಮಿಗಳು ನುಗ್ಗಿ ಹಲ್ಲೆ ನಡೆಸಿದ ಪ್ರಕರಣವನ್ನು ಖಂಡಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿದೆ. ಕಿಡಿಗೇಡಿಗಳಿಗೆ ಪೊಲೀಸರ ಬೆಂಬಲವಿದೆ ಎಂದೂ ಆರೋಪಿಸಲಾಗುತ್ತಿದೆ.