ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ನಲ್ಲಿ ಸ್ಪರ್ಧಿಯಾಗಿರುವ ಆಧುನಿಕ ಕೃಷಿಕ ವರ್ತೂರು ಸಂತೋಷ್ ವಿರುದ್ಧ ಕಳೆದ ಕೆಲ ದಿನಗಳ ಹಿಂದೆ ಹುಲಿ ಉಗುರು ಧರಿಸಿದ್ದಕ್ಕೆ ದೂರು ದಾಖಲಾಗಿತ್ತು. ತೀವ್ರ ವಿಚಾರಣೆ ಬಳಿಕ ವರ್ತೂರು ಅವರಿಗೆ ಜಾಮೀನು ಸಿಕ್ಕಿದೆ.
ಇದೀಗ ಬಿಗ್ ಬಾಸ್ ನ ಮತ್ತೊಬ್ಬ ಸ್ಪರ್ಧಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಿರುತೆರೆ ನಟಿಯಾಗಿ , ಸಿನಿಮಾಗಳಲ್ಲೂ ನಟಿಸಿರುವ ತನಿಷಾ ಕುಪ್ಪಂಡ ಈ ಬಾರಿಯ ಬಿಗ್ ಬಾಸ್ ನಲ್ಲಿ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.
ಇದೀಗ ತನಿಷಾ ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ.
ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪಿಸಿ ಅವರು ದೂರು ನೀಡಿದ್ದಾರೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.
ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕೆಂದು ಎಸ್ ಸಿ ಎಸ್ಟಿ ಕಾಯ್ದೆಡಿ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲಾಗಿದೆ.
ಸ್ಪರ್ಧಿಯಾಗಿರುವ ಪ್ರತಾಪ್ ಜೊತೆ ಮಾತನಾಡುವ ವೇಳೆ ತನಿಷಾ ಅವಹೇಳನಕಾರಿಯಾದ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿದೆ.
ಸ್ಯಾಂಡಲ್ ವುಡ್ ನಲ್ಲಿ ʼಬಾಡಿಗಾಡ್ʼ, ʼಉಂಡೆನಾಮ. ʼಪೆಂಟಗನ್ʼ ಮುಂತಾದ ಸಿನಿಮಾದಲ್ಲಿ ಅವರು ನಟಿಸಿದ್ದಾರೆ.