Advertisement

ಸೋನಾಕ್ಷಿ ವಿರುದ್ಧ ಎಫ್ಐಆರ್‌

12:30 AM Feb 25, 2019 | |

ಮೊರಾದಾಬಾದ್‌: ಕಾರ್ಯಕ್ರಮ ಆಯೋಜಕರೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ಮತ್ತು ಇತರೆ ನಾಲ್ವರ ವಿರುದ್ಧ ಉತ್ತರಪ್ರದೇಶ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. 

Advertisement

ದೆಹಲಿಯಲ್ಲಿ ಆಯೋಜಿಸಲಾಗಿದ್ದ ಬಹುಮಾನ ವಿತರಣಾ ಕಾರ್ಯಕ್ರಮಕ್ಕೆ ಸೋನಾಕ್ಷಿ ಅವರನ್ನು ಅತಿಥಿಯಾಗಿ ಆಹ್ವಾನಿಸುವಂತೆ ಕಂಪನಿಯೊಂದಕ್ಕೆ 24 ಲಕ್ಷ ರೂ.ಗಳನ್ನು ಪಾವತಿಸಿದ್ದೆ. ಕಾರ್ಯಕ್ರಮಕ್ಕೆ ಬರಲು ಸೋನಾಕ್ಷಿ ಒಪ್ಪಿಗೆ ಸೂಚಿಸಿದ್ದರು. ಆದರೆ, ಅವರು ಕಾರ್ಯಕ್ರಮಕ್ಕೆ ಬರಲೂ ಇಲ್ಲ, ಹಣವನ್ನೂ ವಾಪಸ್‌ ನೀಡಲಿಲ್ಲ ಎಂದು ಕಾರ್ಯಕ್ರಮ ಆಯೋಜಕ ಪ್ರಮೋದ್‌ ಶರ್ಮಾ ದೂರಿನಲ್ಲಿ ಆರೋಪಿಸಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next