Advertisement

ಬಿಎಸ್‌ವೈ ವಿರುದ್ಧ ಎಫ್ಐಆರ್‌: ಬಿಜೆಪಿಯಿಂದ ರಾಜ್ಯಪಾಲರಿಗೆ  ದೂರು

01:20 PM Aug 21, 2017 | Team Udayavani |

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್ಐಆರ್‌ ತೆರವಿಗೆ ಆಗ್ರಹಿಸಿ ಕೇಂದ್ರ ಸಚಿವ ಅನಂತ ಕುಮಾರ್‌ ನೇತೃತ್ವದಲ್ಲಿ  ಸೋಮವಾರ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

Advertisement

ಸೋಮವಾರ ಬೆಳಗ್ಗೆ ಬಿಜೆಪಿ ಮುಖಂಡರಾದ ಜಗದೀಶ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಶೋಭಾ ಕರಂದ್ಲಾಜೆ, ಆರ್‌. ಅಶೋಕ್‌ ಸಹಿತ ಹಲವು ನಾಯಕರು ಬೆಂಗಳೂರಿನ ವಿಧಾನಸೌಧ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಮೆರವಣಿಗೆ ಹೊರಟು, ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿ.ಆರ್‌. ವಾಲಾ ಅವರನ್ನು ಭೇಟಿ ಮಾಡಿ ರಾಜ್ಯ ಸರಕಾರ ಎಸಿಬಿ ದುರ್ಬಳಕೆ ಮಾಡಿಕೊಳ್ಳುವುದರ ವಿರುದ್ಧ ದೂರು ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್‌ ಬಿಎಸ್‌ವೈ ವಿರುದ್ದ ಸಿಎಂ ಸಿದ್ದರಾಮಯ್ಯನವರು ಸುಳ್ಳು ಅರೋಪಗಳನ್ನು ಸೃಷ್ಟಿಸಿ ರಾಜಕೀಯ ಸೇಡು ತೀರಿಸಿಕೊಳ್ಳಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. 

ಜಗದೀಶ ಶೆಟ್ಟರ್‌ ಮಾತನಾಡಿ  ಸ್ವತಃ ಸಿದ್ದರಾಮಯ್ಯ ಅವರ ವಿರುದ್ಧವೇ ಎಸಿಬಿಯಲ್ಲಿ 25 ದೂರುಗಳಿವೆ. ಅದರಲ್ಲಿ ಎಷ್ಟು ದೂರುಗಳಿಗೆ ಎಫ್ಐಆರ್‌ ದಾಖಲಿಸಿದ್ದೀರಾ, ಎಷ್ಟು ದೂರುಗಳಿಗೆ ಸಮನ್ಸ್‌ ಜಾರಿಗೊಳಿಸಿದ್ದೀರಾ ಎಂದು ಎಸಿಬಿಯನ್ನು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next