Advertisement

ದಿನೇಶ್‌ ಗುಂಡೂರಾವ್‌ ವಿರುದ್ಧ ಎಫ್ಐಆರ್‌

12:13 PM Apr 18, 2018 | |

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ರಾಷ್ಟ್ರೀಯ ಹಿಂದೂ ಕಾರ್ಯಪಡೆ ಪ್ರಧಾನ ಕಾರ್ಯದರ್ಶಿ ಡಾ.ರಾಮಾಚಾರಿ ಎಂಬುವವರು ದಿನೇಶ್‌ ಗುಂಡೂರಾವ್‌ ವಿರುದ್ಧ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಫ್ಐಆರ್‌ ಹಾಕಿದ್ದಾರೆ.

Advertisement

ಏ. 14ರಂದು ಮೌರ್ಯ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವ ವೇಳೆ ನಾಥ ಪಂಥದ ಸಂತ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಾಜ್ಯಕ್ಕೆ ಕಾಲಿಟ್ಟರೆ ಚಪ್ಪಲಿಯಿಂದ ಹೊಡೆಯುವಂತೆ ದಿನೇಶ್‌ ತಮ್ಮ ಬೆಂಬಲಿಗರನ್ನು ಪ್ರಚೋದಿಸಿದ್ದಾರೆ.

ಈ ಮೂಲಕ ಅಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದು, ರಾಜ್ಯದಲ್ಲಿ ಕೋಮು ಪ್ರಚೋದನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ, ಪ್ರಚೋದನ್ಮಾಕ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಈ ಸಂಬಂಧ ದಿನೇಶ್‌ ಗುಂಡೂರಾವ್‌ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಮಾಚಾರಿ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ. ಹೇಳಿಕೆಯ ವಿಡಿಯೋ ತುಣಕುಗಳನ್ನೂ ಪೊಲೀಸರಿಗೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next