Advertisement

FIR: ಕುಪೇಂದ್ರ ರೆಡ್ಡಿ ಸಹಿತ ನಾಲ್ವರ ವಿರುದ್ಧ ಎಫ್ಐಆರ್‌ 

10:09 PM Feb 22, 2024 | Suhan S |

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸುವಂತೆ ಕಾಂಗ್ರೆಸ್‌ ಶಾಸಕರಿಗೆ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪದಡಿ ರಾಜ್ಯಸಭಾ ಚುನಾವಣೆಯ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಪೇಂದ್ರರೆಡ್ಡಿ ಸಹಿತ ನಾಲ್ವರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿ ಕುಮಾರ್‌(ಗಣಿಗ ರವಿ)  ನೀಡಿದ ದೂರಿನ ಮೇರೆಗೆ ಪೊಲೀಸರು  ಕುಪೇಂದ್ರ ರೆಡ್ಡಿ,  ಹೊಟೇಲ್‌ ಉದ್ಯಮಿ ರವಿ, ಡಾ| ಮಹಾಂತೇಶ್‌ ಹಾಗೂ ಹರಿಹರದ ಮಾಜಿ ಶಾಸಕ ಶಿವಶಂಕರ್‌ ವಿರುದ್ಧ ಎಫ್ಐಆರ್‌ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next