Advertisement
ನಗರದಲ್ಲಿ ಕೋವಿಡ್ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡದ 36 ಖಾಸಗಿ ಆಸ್ಪತ್ರೆಗಳಿಗೆ ಕಾರಣ ಕೇಳಿ ಪಾಲಿಕೆ ಇತ್ತೀಚಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್‌ಗೆ 48 ಗಂಟೆಗಳ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿತ್ತು. ಈ ವೇಳೆ ನಾಲ್ಕು ಪ್ರಮುಖ ಆಸ್ಪತ್ರೆಗಳು ನೀಡಿರುವ ವಿವರಣೆ ಸಂಮಜಸವಾಗಿಲ್ಲ ಎಂದು ಬಿಬಿಎಂಪಿಯು ವಿಪತ್ತು ನಿರ್ವಹಣೆ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿದ್ದು, ಈ ಆಸ್ಪತ್ರೆಗಳ ಮೇಲೆ ಎಫ್ಐಆರ್ ದಾಖಲಿಸುವಂತೆ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಆಸ್ಪತ್ರೆ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಪತ್ರ ಬರೆದಿದ್ದಾರೆ.
Advertisement
ಪಾಲಿಕೆಯಿಂದ ನಾಲ್ಕು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್ಐಆರ್?
12:01 PM Sep 25, 2020 | Suhan S |
Advertisement
Udayavani is now on Telegram. Click here to join our channel and stay updated with the latest news.